ಜಮ್ಮು: ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನಿ ಸೇನೆಯು ಶುಕ್ರವಾರ ಶೆಲ್ ಮತ್ತು ಗುಂಡಿನ ದಾಳಿ ನಡೆಸಿದ್ದು, ಇದರಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದರು.
ಪಾಕಿಸ್ತಾನಿ ಸೇನೆಯು ಸುಂದರ್‌ಬಾನಿ ವಲಯದಲ್ಲಿ ಅಪ್ರಚೋದಿತ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂಘಿಸಿದೆ. ಇದಕ್ಕೆ ಭಾರತೀಯ ಸೇನೆಯು ತಕ್ಕ ಪ್ರತ್ಯುತ್ತರ ನೀಡಿದೆ ಎಂದು ರಕ್ಷಣಾ ವಕ್ತಾರರು ಮಾಹಿತಿ ನೀಡಿದರು.
‘ಈ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಾಯಕ್ ಪ್ರೇಮ್ ಬಹದ್ದೂರ್ ಖತ್ರಿ ಮತ್ತು ಸುಕ್ಬೀರ್ ಸಿಂಗ್ ಅವರು ಮೃತಪಟ್ಟಿದ್ದಾರೆ. ಅವರ ಕರ್ತವ್ಯ ನಿಷ್ಠೆ ಮತ್ತು ತ್ಯಾಗಕ್ಕಾಗಿ ದೇಶ ಸದಾ ಚಿರಋಣಿಯಾಗಿರುತ್ತದೆ’ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.