ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಭಾನುವಾರ ನಡೆದ ಗುಂಡಿನ ದಾಳಿಯಲ್ಲಿಸೇನೆಯ ಯೋಧರೊಬ್ಬರು ಮೃತಪಟ್ಟಿದ್ದಾರೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.
ನೌಶೇರಾ ಸೆಕ್ಟರ್ನ ಗಡಿನಿಯಂತ್ರಣ ರೇಖೆಯ ಬಳಿ ಅನುಮಾನಾಸ್ಪದ ಚಟುವಟಿಕೆಗಳು ಗಮನಕ್ಕೆ ಬಂದವು. ಈ ಬಗ್ಗೆ ಪರಿಶೀಲಿಸುವಷ್ಟರಲ್ಲಿ ಗಡಿಯಾಚೆಯಿಂದ ಗುಂಡಿನ ದಾಳಿ ನಡೆಯಿತು. ಭಾರತೀಯ ಸೇನೆಯು ಇದಕ್ಕೆ ತಕ್ಕ ಉತ್ತರ ನೀಡಿದೆ. ಆದರೆ ಈ ವೇಳೆ ಯೋಧರೊಬ್ಬರು ಮೃತಪಟ್ಟರು ಎಂದು ಮೂಲಗಳು ಹೇಳಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.