ADVERTISEMENT

ಜಮ್ಮು ಮತ್ತು ಕಾಶ್ಮೀರ: ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ಆರಂಭಿಸಿದ ಸೇನೆ

ಪಿಟಿಐ
Published 14 ಆಗಸ್ಟ್ 2024, 2:53 IST
Last Updated 14 ಆಗಸ್ಟ್ 2024, 2:53 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

–ಪಿಟಿಐ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರ ಜಿಲ್ಲೆಯಲ್ಲಿ ಅಡಗಿರುವ ಭಯೋತ್ಪಾದಕರ ವಿರುದ್ಧ ಸೇನೆಯು ಮಂಗಳವಾರ ರಾತ್ರಿ ಕಾರ್ಯಾಚರಣೆ ಆರಂಭಿಸಿದೆ.

ADVERTISEMENT

ಗುಪ್ತಚರ ಮಾಹಿತಿ ಆಧರಿಸಿ, ಪಟನಿಟಾಪ್‌ ಪಟ್ಟಣಕ್ಕೆ ಸಮೀಪದ ಅಕರ್ ಅರಣ್ಯ ಪ್ರದೇಶದಲ್ಲಿ ಸೇನಾ ಸಿಬ್ಬಂದಿ ಹಾಗೂ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆಗಿಳಿದಿದ್ದಾರೆ.

ಉಗ್ರರು ಇರುವುದು ಖಚಿತವಾಗುತ್ತಿದ್ದಂತೆ ಶೋಧ ಕಾರ್ಯಾಚರಣೆ ಆರಂಭಿಸಲಾಗಿದ್ದು, ಈಗಲೂ ಮುಂದುವರಿದಿದೆ ಎಂದು ಬುಧವಾರ ಬೆಳಿಗ್ಗೆ ಅಧಿಕಾರಿಗಳು ತಿಳಿಸಿದ್ದಾರೆ.

ಉಧಮ್‌ಪುರ ಜಿಲ್ಲೆಯಲ್ಲಿ, ಅದರಲ್ಲೂ ಮುಖ್ಯವಾಗಿ ಬಸಂತಗಢ ಪ್ರದೇಶದಲ್ಲಿ ಸಕ್ರಿಯವಾಗಿರುವ ಭಯೋತ್ಪಾದಕ ಸಂಘಟನೆಯ ಮೇಲೆ ಭದ್ರತಾ ಪಡೆಗಳು ಕಳೆದ ಒಂದು ವಾರದಿಂದ ತೀವ್ರ ನಿಗಾ ಇರಿಸಿವೆ.

ಬಸಂತಗಢ ಹಾಗೂ ಕಿಶ್ತ್‌ವಾರ ಜಿಲ್ಲೆಯ ನೌನಟ್ಟದಲ್ಲಿ ಸೇನೆ ಹಾಗೂ ಉಗ್ರರ ನಡುವೆ ಭಾನುವಾರ ಗುಂಡಿನ ಕಾಳಗ ನಡೆದಿತ್ತು. ಅದರ ಬೆನ್ನಲ್ಲೇ ಉಗ್ರರು ಪಲಾಯನ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.