ಚಂಡೀಗಢ: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐನೊಂದಿಗೆ ಸೇರಿ ಬೇಹುಗಾರಿಕೆ ನಡೆಸುತ್ತಿರುವ ಆರೋಪದಡಿ ಯೋಧ ಮತ್ತು ಅವರ ಸಹಚರನನ್ನು ಪೊಲೀಸರು ಬಂಧಿಸಿದ್ದಾರೆ.
ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅಮೃತ್‌ಸರದ ಧರಿವಾಲ್‌ನ ನಿವಾಸಿ ಗುರ್‌ಪ್ರೀತ್ ಸಿಂಗ್ ಹಾಗೂ ಅವರ ಸಹಚರ ಸಾಹಿಲ್ ಮಸಿಹ್ ಬಂಧಿತರು. ಆರೋಪಿಗಳು ಇಂಟರ್ ಸರ್ವಿಸಸ್ ಇಂಟಲಿಜೆನ್ಸ್‌ನೊಂದಿಗೆ (ಐಎಸ್‌ಐ) ಜತೆ ಸಂಪರ್ಕ ಹೊಂದಿದ್ದರು ಎಂದು ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ತಿಳಿಸಿದ್ದಾರೆ.
2016ರಲ್ಲಿ ಭಾರತೀಯ ಸೇನೆ ಸೇರಿದ್ದ ಗುರುಪ್ರೀತ್, ತನ್ನ ಅಧಿಕಾರ ದುರುಪಯೋಗಪಡಿಸಿಕೊಂಡು ಐಎಸ್‌ಐಯೊಂದಿಗೆ ನೇರ ಸಂಪರ್ಕ ಹೊಂದಿದ್ದರು. ಪೆನ್‌ಡ್ರೈವ್ ಮೂಲಕ ಸೇನೆಗೆ ಸಂಬಂಧಿಸಿದ ಸೂಕ್ಷ್ಮ ಮತ್ತು ಗೌಪ್ಯ ಮಾಹಿತಿಗಳನ್ನು ಹಂಚಿಕೊಳ್ಳುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ದತ್ತಾಂಶಗಳನ್ನು ಐಎಸ್‌ಐಗೆ ನೀಡುವ ವೇಳೆ ಗುರುಪ್ರೀತ್ ಮತ್ತು ಮಸಿಹ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಐಎಸ್‌ಐನೊಂದಿಗೆ ಸಂಪರ್ಕ ಸಾಧಿಸಲು ಬಳಸುತ್ತಿದ್ದ ಎರಡು ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ಐಎಸ್‌ಐನ ಪ್ರಮುಖ ಏಜೆಂಟ್ ರಾಣಾ ಜಾವೇಧ್ ಕೈವಾಡವಿದೆ ಎಂದು ತಿಳಿದು ಬಂದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.