ದಿನ್‌ಜನ್ (ಅಸ್ಸಾಂ): ಯುದ್ಧ ಸ್ಥಿತಿ ನಿರ್ಮಾಣವಾದರೆ, ಸೇನೆಯು ಸನ್ನದ್ಧವಾಗಿರಬೇಕು ಎನ್ನುವ ದೃಷ್ಟಿಯಿಂದ ಅರುಣಾಚಲ ಪ್ರದೇಶದಲ್ಲಿರುವ ವಾಸ್ತವ ನಿಯಂತ್ರಣ ರೇಖೆ ಉದ್ದಕ್ಕೂ ಸೇನಾ ನಿಯೋಜನೆಗೆ ಸಂಬಂಧಿಸಿದಂತೆ ಮಹತ್ವದ ಬದಲಾವಣೆಗಳನ್ನು ಮಾಡಲಾಗುತ್ತಿದೆ ಎಂದು ಭಾರತೀಯ ಸೇನೆಯ ಉನ್ನತ ಮಟ್ಟದ ಅಧಿಕಾರಿಗಳು ತಿಳಿಸಿದ್ದಾರೆ.
ಚೀನಾವು ಪೂರ್ವ ಲಡಾಖ್ ಪ್ರದೇಶದಲ್ಲಿ ಎರಡು ವರ್ಷಗಳಿಗೂ ಹೆಚ್ಚು ಕಾಲದಿಂದ ಸಂಘರ್ಷ ಸ್ಥಿತಿಯನ್ನು ನಿರ್ಮಾಣ ಮಾಡಿದೆ. ಆದ್ದರಿಂದ ಸೇನೆಯು ಈ ಕ್ರಮ ಕೈಗೊಳ್ಳುತ್ತಿದೆ ಎನ್ನಲಾಗುತ್ತಿದೆ.
‘ರಸ್ತೆ, ಸೇತುವೆ, ಸುರಂಗಗಳು ಹಾಗೂ ಹೆಲಿಪ್ಯಾಡ್‌ಗಳು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಕಾಲಮಿತಿಯೊಳಗೆ ಈ ಎಲ್ಲದರ ನಿರ್ಮಾಣವಾಗಬೇಕು ಎಂದೂ ಯೋಜಿಸಲಾಗಿದೆ’ ಎಂದು 2 ಮೌಂಟನ್ ಡಿವಿಜನ್‌ನ ಮುಖ್ಯಸ್ಥ ಮೇಜರ್ ಜನರಲ್ ಎಂ.ಎಸ್. ಬೈನ್ಸ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.