ADVERTISEMENT

ಅರುಣಾಚಲ ಪ್ರದೇಶ ಗಡಿಯಲ್ಲಿ ಮೂಲಸೌಕರ್ಯ ಹೆಚ್ಚಿಸುತ್ತಿರುವ ಚೀನಾ: ಭಾರತೀಯ ಸೇನೆ

ಪಿಟಿಐ
Published 16 ಮೇ 2022, 15:47 IST
Last Updated 16 ಮೇ 2022, 15:47 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಗುವಾಹಟಿ: ಅರುಣಾಚಲ ಪ್ರದೇಶದ ಅಂತರರಾಷ್ಟ್ರೀಯ ಗಡಿ ಪ್ರದೇಶದಲ್ಲಿ ಚೀನಾದ ‘ಪೀಪಲ್ಸ್ ಲಿಬರೇಷನ್ ಆರ್ಮಿ’ಯು ಮೂಲಸೌಕರ್ಯ ಸಾಮರ್ಥ್ಯ ಹೆಚ್ಚಿಸುತ್ತಿದೆ ಎಂದು ಭಾರತೀಯ ಸೇನೆಯ ಪೂರ್ವ ಕಮಾಂಡ್ ಮುಖ್ಯಸ್ಥರು ಸೋಮವಾರ ತಿಳಿಸಿದ್ದಾರೆ.

ಭಾರತೀಯ ಸೇನೆ ಕೂಡ ನಿರಂತರವಾಗಿ ತನ್ನ ಮೂಲಸೌಕರ್ಯ ಹೆಚ್ಚಿಸಿಕೊಳ್ಳುತ್ತಿದೆ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಾಮರ್ಥ್ಯ ಹೆಚ್ಚಿಸಿಕೊಳ್ಳುತ್ತಿದೆ ಎಂದು ಪೂರ್ವ ಕಮಾಂಡ್‌ನ ಜನರಲ್ ಆಫೀಸರ್ ಕಮಾಂಡಿಂಗ್ ಇನ್ ಚೀಫ್, ಲೆಫ್ಟಿನೆಂಟ್ ಜನರಲ್ ಆರ್.ಪಿ. ಕಲಿತ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಟಿಬೆಟ್ ಪ್ರದೇಶದ ನೈಜ ನಿಯಂತ್ರಣ ರೇಖೆಯಾದ್ಯಂತ (ಎಲ್‌ಎಸಿ) ಮೂಲಸೌಕರ್ಯ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿದೆ. ಚೀನಾ ಸೇನೆ ಕೂಡ ರಸ್ತೆ, ರೈಲು ಹಾಗೂ ವಾಯು ಮಾರ್ಗವನ್ನು ಮೇಲ್ದರ್ಜೆಗೆ ಏರಿಸುತ್ತಿದೆ’ ಎಂದು ಮಾಹಿತಿ ನೀಡಿದ್ದಾರೆ.

ಚೀನಾದವರು ಎಲ್‌ಎಸಿಗೆ ಸಮೀಪದಲ್ಲಿ ಗಡಿ ಗ್ರಾಮಗಳನ್ನು ನಿರ್ಮಿಸಿಕೊಂಡಿದ್ದಾರೆ. ನಾವು ನಿರಂತರವಾಗಿ ಪರಿಸ್ಥಿತಿಯನ್ನು ಗಮನಿಸುತ್ತಿದ್ದೇವೆ. ನಾವು ಕೂಡ ಮೂಲಸೌಕರ್ಯ ಹಾಗೂ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳುತ್ತಿದ್ದೇವೆ. ಪರಿಸ್ಥಿತಿ ನಿಭಾಯಿಸುವ ತಂತ್ರಗಾರಿಕೆಯನ್ನೂ ಬಲಪಡಿಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.