ಯೋಧನ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯ
ನವದೆಹಲಿ: ಯೋಧರೊಬ್ಬರ ಮೇಲೆ ಟೋಲ್ ಸಿಬ್ಬಂದಿ ಹಲ್ಲೆ ನಡೆಸಿರುವ ಘಟನೆ ಉತ್ತರಪ್ರದೇಶದ ಮೀರತ್ ಜಿಲ್ಲೆಯಲ್ಲಿ ನಡೆದಿದೆ.
ಪ್ರಕರಣ ಸಂಬಂಧ 6 ಮಂದಿಯನ್ನು ಬಂಧಿಸಲಾಗಿದ್ದು, ಇತರ ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ರಜಪೂತ್ ರೆಜಿಮೆಂಟಿನ ಸೈನಿಕ, ಗೋಟ್ಕ ಗ್ರಾಮದ ನಿವಾಸಿ ಕಪಿಲ್ ಕವಡ ಅವರು ತಮ್ಮ ಸಹೋದರನೊಂದಿಗೆ ದೆಹಲಿಗೆ ತೆರಳುತ್ತಿದ್ದ ವೇಳೆ ಸರ್‌ಪುರ ಟೋಲ್ ಬಳಿ ಘಟನೆ ನಡೆದಿದೆ.
ಟೋಲ್ ಸಿಬ್ಬಂದಿ ಕಪಿಲ್ ಅವರಿಗೆ ಕಾಲಿನಿಂದ ಒದ್ದಿರುವ ಮತ್ತು ದೊಣ್ಣೆಯಿಂದ ಹಲ್ಲೆ ನಡೆಸಿರುವ ದೃಶ್ಯ ವಿಡಿಯೊದಲ್ಲಿದೆ. ವ್ಯಕ್ತಿಯೊಬ್ಬ ಕಪಿಲ್ ಮೇಲೆ ಕಲ್ಲು ಎತ್ತಿಹಾಕಲು ಮುಂದಾದ ದೃಶ್ಯವು ಸೆರೆಯಾಗಿದೆ. ಕಪಿಲ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಸ್ತುತ ಶ್ರೀನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಪಿಲ್ ಅವರು ದೆಹಲಿಯಿಂದ ವಿಮಾನದ ಮೂಲಕ ತೆರಳಬೇಕಿತ್ತು. ವಿಮಾನ ನಿಲ್ದಾಣಕ್ಕೆ ತಲುಪಲು ವಿಳಂಬವಾಗುತ್ತದೆ ಎಂಬ ಕಾರಣಕ್ಕೆ ತನ್ನನ್ನು ಹೋಗಲು ಬಿಡುವಂತೆ ಟೋಲ್ ಸಿಬ್ಬಂದಿಗೆ ಮನವಿ ಮಾಡಿದ್ದಾರೆ. ಈ ವೇಳೆ ವಾಗ್ವಾದ ಮತ್ತು ಹಲ್ಲೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.