ADVERTISEMENT

ಆತ್ಮಹತ್ಯೆ ಪ್ರಕರಣ: ಆರೋಪಪಟ್ಟಿ ಸಲ್ಲಿಸದಂತೆ ತಡೆ ನೀಡಲು ಅರ್ನಬ್‌ ಅರ್ಜಿ

ಪಿಟಿಐ
Published 3 ಡಿಸೆಂಬರ್ 2020, 15:42 IST
Last Updated 3 ಡಿಸೆಂಬರ್ 2020, 15:42 IST
ಅರ್ನಬ್‌ ಗೋಸ್ವಾಮಿ
ಅರ್ನಬ್‌ ಗೋಸ್ವಾಮಿ   

ಮುಂಬೈ: 2018ರಲ್ಲಿ ನಡೆದ ಅನ್ವಯ್‌ ನಾಯ್ಕ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಪ್ರಕ್ರಿಯೆಗಳು ಹಾಗೂ ಆರೋಪಪಟ್ಟಿ ಸಲ್ಲಿಕೆಗೆ ತಡೆ ನೀಡುವಂತೆ ಕೋರಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್‌ ಗೋಸ್ವಾಮಿ ಅವರು ಗುರುವಾರ ಬಾಂಬೆ ಹೈಕೋರ್ಟ್‌ಗೆ ತುರ್ತು ಅರ್ಜಿ ಸಲ್ಲಿಸಿದ್ದಾರೆ.

‘ಪ್ರಕರಣವನ್ನು ರಾಜ್ಯ ಸಿಐಡಿಯಿಂದ ಮರು ತನಿಖೆಗೆ ಒಳಪಡಿಸುವಂತೆ ಆದೇಶಿಸಲು ಮಹಾರಾಷ್ಟ್ರ ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ಅವರಿಗೆ ಅಧಿಕಾರವಿಲ್ಲ. ಏಕೆಂದರೆ ಈ ಹಿಂದೆ ರಾಯಗಡ್‌ ಜಿಲ್ಲೆಯ ಅಲಿಬಾಗ್‌ ಪೊಲೀಸರು ನಡೆಸಿದ ತನಿಖೆಯನ್ನು ಕಳೆದ ವರ್ಷವೇ ಮುಕ್ತಾಯಗೊಳಿಸಲಾಗಿತ್ತು’ ಎಂದು ಅರ್ಜಿಯಲ್ಲಿ ಅರ್ನಬ್‌ ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಲ್ಲಿ ಒಬ್ಬರಾದ ಅರ್ನಬ್‌ ಅವರನ್ನು ಕಳೆದ ತಿಂಗಳು ಅಲಿಬಾಗ್‌ ಪೊಲೀಸರು ಬಂಧಿಸಿದ್ದರು. ಸುಪ್ರೀಂ ಕೋರ್ಟ್‌ ಅರ್ನಬ್‌ಗೆ ಇತ್ತೀಚೆಗೆ ಜಾಮೀನು ನೀಡಿತ್ತು. ‘ನ.4ರಂದು ನನ್ನನ್ನು ಬಂಧಿಸಿರುವುದು ಕಾನೂನು ಬಾಹಿರ. ಈ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಸ್ವತಂತ್ರ ತನಿಖಾ ಸಂಸ್ಥೆಗೆ ಹೈಕೋರ್ಟ್‌ ವರ್ಗಾಯಿಸಬೇಕು’ ಎಂದು ಅರ್ಜಿಯಲ್ಲಿ ಕೋರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.