ಚಿತ್ರ ಕೃಪೆ: ಪಿಟಿಐ
ಪ್ರವಾಹದಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ರಕ್ಷಣೆ
ಕಾಂಗ್ರಾ: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಿಂದ ಅರ್ನಿ ವಿಶ್ವವಿದ್ಯಾಲಯದಲ್ಲಿ ಪ್ರವಾಹ ಭೀತಿ ಉಂಟಾಗಿದೆ. 400 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ಥಳದಲ್ಲಿ ಸಿಲುಕಿದ್ದರು.
ವಿಷಯ ತಿಳಿದ ಎನ್‌ಡಿಆರ್‌ಎಫ್ ತಂಡ ಪ್ರವಾಹದಲ್ಲಿ ಸಿಲುಕಿದ ವಿದ್ಯಾರ್ಥಿಗಳನ್ನು ಹಗ್ಗದ ಮೂಲಕ ರಕ್ಷಿಸಿ, ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಿದ್ದಾರೆ.
ಸುತ್ತಮುತ್ತ ಭಾರೀ ಮಳೆಯಾಗುತ್ತಿರುವುದರಿಂದ ಪಾಂಗ್ ಅಣೆಕಟ್ಟಿನಿಂದ ನೀರನ್ನು ಬಿಡುಗಡೆ ಮಾಡಿದ ನಂತರ ವಿಶ್ವವಿದ್ಯಾಲಯದ ಆವರಣ ಸಂಪೂರ್ಣ ಜಲಾವೃತವಾಗಿ ಪ್ರವಾಹ ಭೀತಿ ಉಂಟಾಗಿತ್ತು.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.