ADVERTISEMENT

ದೆಹಲಿ ಪೊಲೀಸ್ ಇಲಾಖೆಯ 1000 ಸಿಬ್ಬಂದಿಗೆ ಕೋವಿಡ್

​ಪ್ರಜಾವಾಣಿ ವಾರ್ತೆ
Published 10 ಜನವರಿ 2022, 9:07 IST
Last Updated 10 ಜನವರಿ 2022, 9:07 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸರಿಸುಮಾರು ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ, ಅಧಿಕಾರಿಗಳಿಗೆ ಕೊರೊನಾ ಸೋಂಕು ತಗುಲಿರುವುದು ಸೋಮವಾರ ದೃಢವಾಗಿದೆ.

'ಸಾರ್ವಜನಿಕ ಸಂಪರ್ಕ ಅಧಿಕಾರಿ ಮತ್ತು ಹೆಚ್ಚುವರಿ ಆಯುಕ್ತ ಚಿನ್ಮೋಯ್ ಬಿಸ್ವಾಲ್ ಸೇರಿದಂತೆ ದೆಹಲಿಯ ಸುಮಾರು 1000 ಪೊಲೀಸ್ ಸಿಬ್ಬಂದಿಗೆ ಕೋವಿಡ್ ಬಂದಿದೆ. ಎಲ್ಲಾ ಸೋಂಕಿತ ಸಿಬ್ಬಂದಿ ಕ್ವಾರಂಟೈನ್‌ನಲ್ಲಿದ್ದಾರೆ' ಎಂದು ಸುದ್ದಿ ಸಂಸ್ಥೆ ಎಎನ್ ಐ ವರದಿ ಮಾಡಿದೆ.

ಸಂಸತ್ತಿನ 400ಕ್ಕೂ ಹೆಚ್ಚು ಸಿಬ್ಬಂದಿಗೆ ಕೋವಿಡ್ ಇರುವುದು ಭಾನುವಾರ ಬಹಿರಂಗವಾಗಿತ್ತು‌. ಈ ಮಧ್ಯೆ, ದೆಹಲಿ ಪೊಲೀಸ್ ಸಿಬ್ಬಂದಿಗೂ ಸೋಂಕು ತಗಲಿದೆ.

ADVERTISEMENT

ದೆಹಲಿಯಲ್ಲಿ ಭಾನುವಾರು ಒಟ್ಟು 22,751 ಕೋವಿಡ್ ಪ್ರಕರಣಗಳು ವರದಿಯಾಗಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.