ADVERTISEMENT

SIR: 1.36 ಕೋಟಿ ಮತದಾರರ ವಿಚಾರಣೆ: ಮನೋಜ್‌ ಕುಮಾರ್‌ ಅಗರ್ವಾಲ್‌

ಪಿಟಿಐ
Published 17 ಡಿಸೆಂಬರ್ 2025, 16:04 IST
Last Updated 17 ಡಿಸೆಂಬರ್ 2025, 16:04 IST
.
.   

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ (ಎಸ್‌ಐಆರ್‌) ಭಾಗವಾಗಿ ಸುಮಾರು 1.36 ಕೋಟಿ ಮತದಾರರನ್ನು ವಿಚಾರಣೆಗೆ ಕರೆಯಲಾಗುವುದು ಎಂದು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ ಮನೋಜ್‌ ಕುಮಾರ್‌ ಅಗರ್ವಾಲ್‌ ತಿಳಿಸಿದರು.

ರಾಜ್ಯದಲ್ಲಿ ನಿಗದಿಪಡಿಸಿದ ಕಾಲಮಿತಿಯ ಒಳಗಾಗಿ ಎಸ್‌ಐಆರ್‌ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.

‘1.36 ಕೋಟಿ ಮತದಾರರನ್ನು ವಿಚಾರಣೆಗೆ ಕರೆಯಲಾಗುವುದು. ಈ ಸಂಖ್ಯೆ ಇನ್ನೂ ಕಡಿಮೆಯಾಗುವ ಸಾಧ್ಯತೆ ಇದೆ. ಒಂದು ವೇಳೆ ನೈಜ ಕಾರಣಗಳಿಂದ ಕೆಲವರಿಗೆ ಪಾಲ್ಗೊಳ್ಳಲು ಸಾಧ್ಯವಾಗದಿದ್ದರೆ ಅದನ್ನು ಪರಿಗಣಿಸಲಾಗುವುದು’ ಎಂದು ಅವರು ಹೇಳಿದರು.

ADVERTISEMENT

ಮಾಹಿತಿ ತಾಳೆಯಾಗದ ಕಾರಣ ಕೆಲವು ಹೆಸರುಗಳನ್ನು ಕರಡು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ ಎಂದು ಅವರು ತಿಳಿಸಿದರು.

ಆಯೋಗವು ಮಂಗಳವಾರ ಪಶ್ಚಿಮ ಬಂಗಾಳದಲ್ಲಿ ಮತದಾರರ ಕರಡು ಪಟ್ಟಿಯನ್ನು ಪ್ರಕಟಿಸಿದೆ. ಸಾವು, ಶಾಶ್ವತ ವಲಸೆ ಮತ್ತು ಅರ್ಜಿ ನಮೂನೆಗಳನ್ನು ಸಲ್ಲಿಸದಿರುವುದು ಸೇರಿದಂತೆ ವಿವಿಧ ಕಾರಣಗಳಿಗಾಗಿ 58 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರನ್ನು ಕೈಬಿಟ್ಟಿದೆ.

‘ಕರಡು ಪಟ್ಟಿಯಿಂದ ಹೆಸರು ತೆಗೆದುಹಾಕಲ್ಪಟ್ಟವರು ಫಾರ್ಮ್‌ 6 ಮತ್ತು ಅಗತ್ಯ ದಾಖಲೆಗಳೊಂದಿಗೆ ತಮ್ಮ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಬಹುದು’ ಎಂದು ತಿಳಿಸಿದರು.

ಬೂತ್ ಮಟ್ಟದ ಅಧಿಕಾರಿಗಳು ಮನೆಮನೆಗೆ ಭೇಟಿ ನೀಡಿ ವಿಚಾರಣೆಗೆ ಹಾಜರಾಗಬೇಕಿರುವ ಮತದಾರರಿಗೆ ಮಾಹಿತಿ ನೀಡುತ್ತಿದ್ದಾರೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.