ದೆಹಲಿಯ ಶಾಲೆಗಳಿಗೆ ಬಾಂಬ್ ಬೆದರಿಕೆ
(ಪಿಟಿಐ ಚಿತ್ರ)
ನವದೆಹಲಿ: ದೆಹಲಿಯ ಸುಮಾರು 30 ಶಾಲೆಗಳಿಗೆ ಶುಕ್ರವಾರ ನಸುಕಿನಲ್ಲಿ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ.
ಪೊಲೀಸರು ಬಾಂಬ್ ಪತ್ತೆ ತಂಡ, ಶ್ವಾನದಳ ಹಾಗೂ ಅಗ್ನಿಶಾಮಕ ದಳದೊಂದಿಗೆ ದೌಡಾಯಿಸಿ, ಶಾಲಾ ಕಟ್ಟಡಗಳು ಮತ್ತು ಆವರಣಗಳಲ್ಲಿ ತೀವ್ರ ತಪಾಸಣೆ ನಡೆಸಿದರು. ಆದರೆ, ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಲಿಲ್ಲ. ಇದೊಂದು ಹುಸಿ ಬೆದರಿಕೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.
ದೆಹಲಿ ಪೊಲೀಸ್ ವಿಶೇಷ ಘಟಕವು ಕ್ರಿಮಿನಲ್ ಬೆದರಿಕೆ ಮತ್ತು ಪಿತೂರಿಯ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದೆ. ಬೆದರಿಕೆ ಸಂದೇಶ ಕಳುಹಿಸಿದ ಆರೋಪಿಗಳ ಬಗ್ಗೆ ಸುಳಿವು ಸಿಕ್ಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
‘ಇ-ಮೇಲ್ ವಿದೇಶದಿಂದ ಬಂದಿರುವುದು ತನಿಖೆಯಲ್ಲಿ ದೃಢಪಟ್ಟಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ. ನಮ್ಮ ಜಿಲ್ಲೆ ಸೇರಿದಂತೆ ಸುಮಾರು 30 ಶಾಲೆಗಳಿಗೆ ಇಂತಹ ಇಮೇಲ್‌ಗಳು ಬಂದಿವೆ’ ಡಿಸಿಪಿ (ಆಗ್ನೇಯ) ರವಿ ಸಿಂಗ್ ಅವರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಡಿಸೆಂಬರ್ 9ರಂದು ದೆಹಲಿಯ 44 ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ಮೇ ತಿಂಗಳಲ್ಲಿ 250ಕ್ಕೂ ಅಧಿಕ ಶಾಲೆಗಳು, ಆಸ್ಪತ್ರೆ ಮತ್ತು ಇತರೆ ಸಂಸ್ಥೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.