ADVERTISEMENT

ಪಾರ್ಥ ಚಟರ್ಜಿ ನನ್ನ ಮನೆಯನ್ನೇ ಮಿನಿಬ್ಯಾಂಕ್ ಮಾಡಿಕೊಂಡಿದ್ದರು: ಅರ್ಪಿತಾ ಮುಖರ್ಜಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಜುಲೈ 2022, 10:23 IST
Last Updated 28 ಜುಲೈ 2022, 10:23 IST
ಅರ್ಪಿತಾ ಮುಖರ್ಜಿ
ಅರ್ಪಿತಾ ಮುಖರ್ಜಿ   

ಕೋಲ್ಕತ್ತ: ಶಿಕ್ಷಕರ ನೇಮಕಾತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಅವರ ಆಪ್ತೆ ಅರ್ಪಿತಾ ಮುಖರ್ಜಿ ಜಾರಿ ನಿರ್ದೇಶನಾಲಯದ (ಇ.ಡಿ) ಎದುರು ಹಲವು ವಿಚಾರಗಳನ್ನು ಬಹಿರಂಗಪಡಿಸಿದ್ದಾರೆ.

ಪಾರ್ಥ ಚಟರ್ಜಿಯವರು ನಮ್ಮ ಮನೆಯಲ್ಲಿ ಅಪಾರ ಪ್ರಮಾಣದ ಹಣ ಸಂಗ್ರಹಿಸಿಡುತ್ತಿದ್ದರು. ನಮ್ಮ ಮನೆಯನ್ನೇ ಮಿನಿ-ಬ್ಯಾಂಕ್‌ನಂತೆ ನಡೆಸಿಕೊಳ್ಳುತ್ತಿದ್ದರು ಎಂದು ಅರ್ಪಿತಾ ಹೇಳಿಕೆ ನೀಡಿರುವುದಾಗಿ ವರದಿಯಾಗಿದೆ.

ನಟಿ, ರೂಪದರ್ಶಿ ಹಾಗೂ ಸಚಿವರ ಆಪ್ತ ಸಹಾಯಕಿ ಅರ್ಪಿತಾ ಮುಖರ್ಜಿ ಅವರ ಬೆಲ್‌ಘಾರಿಯಾ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ರಾತ್ರಿ ₹ 27.9 ಕೋಟಿ ನಗದು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದುವರೆಗೆ ಅರ್ಪಿತಾ ಅವರ ಬಳಿ ಸರಿ ಸುಮಾರು ₹ 50 ಕೋಟಿಯಷ್ಟು ಹಣ ವಶಕ್ಕೆ ಪಡೆಯಲಾಗಿದೆ.

ADVERTISEMENT

ಕಳೆದ ಶನಿವಾರದಂದು (ಜುಲೈ 23) ಅರ್ಪಿತಾ ಮತ್ತು ಪಾರ್ಥ ಚಟರ್ಜಿಯನ್ನು ಬಂಧಿಸುವ ಒಂದು ದಿನದ ಮೊದಲು ಆಕೆಯ ಮನೆಯಲ್ಲಿ ಹಣದ ದೊಡ್ಡ ರಾಶಿಯ ದೃಶ್ಯ ಕಂಡುಬಂದಿತ್ತು.

ಇದುವರೆಗೆ ಅರ್ಪಿತಾ ಅವರ ಬಳಿ ಸರಿ ಸುಮಾರು ₹ 50 ಕೋಟಿಯಷ್ಟು ಹಣವನ್ನು ವಶಕ್ಕೆ ಪಡೆಯಲಾಗಿದೆ. ಹಣದ ರಾಶಿಯ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಹಣವನ್ನು ಪಾರ್ಥ ಚಟರ್ಜಿ ಮತ್ತು ಅವರ ಸಹಚರರು ಮಾತ್ರ ಪ್ರವೇಶಿಸುವ ಕೋಣೆಯೊಂದರಲ್ಲಿ ಇಡುತ್ತಿದ್ದರು ಎಂದು ಇ.ಡಿ ವಿಚಾರಣೆ ವೇಳೆ ಅರ್ಪಿತಾ ಹೇಳಿರುವುದಾಗಿ ಮೂಲಗಳು ತಿಳಿಸಿವೆ.

ಸಚಿವರು ಪ್ರತಿ ವಾರ ಅಥವಾ 10 ದಿನಗಳಿಗೊಮ್ಮೆ ಅರ್ಪಿತಾ ಮನೆಗೆ ಭೇಟಿ ನೀಡುತ್ತಿದ್ದರು ಎಂದು ಮೂಲಗಳು ಹೇಳಿವೆ. ‘ಪಾರ್ಥ ಚಟರ್ಜಿ ನನ್ನ ಮನೆ ಮತ್ತು ಇನ್ನೊಬ್ಬ ಮಹಿಳೆಯ ಮನೆಯನ್ನು ಮಿನಿ ಬ್ಯಾಂಕ್ ಆಗಿ ಬಳಸಿಕೊಂಡಿದ್ದಾರೆ. ಆ ಮಹಿಳೆ ಕೂಡ ಅವರ ಆಪ್ತ ಸ್ನೇಹಿತೆ’ ಎಂದು ಅರ್ಪಿತಾ ತಿಳಿಸಿದ್ದಾರೆ ಎನ್ನಲಾಗಿದೆ.

‘ಪಾರ್ಥ ಚಟರ್ಜಿ ನನ್ನ ಮನೆ ಮತ್ತು ಇನ್ನೊಬ್ಬ ಮಹಿಳೆಯ ಮನೆಯನ್ನು ಮಿನಿ ಬ್ಯಾಂಕ್ ಆಗಿ ಬಳಸಿಕೊಂಡಿದ್ದಾರೆ. ಆ ಮಹಿಳೆ ಕೂಡ ಅವರ ಆಪ್ತ ಸ್ನೇಹಿತೆ’ ಎಂದು ಅರ್ಪಿತಾ ಮುಖರ್ಜಿ ತನಿಖಾಧಿಕಾರಿಗಳಿಗೆ ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ.

ಕೋಣೆಯಲ್ಲಿ ಎಷ್ಟು ಹಣವಿದೆ ಎಂದು ಪಾರ್ಥ ಚಟರ್ಜಿ ಎಂದಿಗೂ ಬಹಿರಂಗಪಡಿಸಲಿಲ್ಲ. ಅರ್ಪಿತಾಗೆ ಬಂಗಾಳಿ ನಟರೊಬ್ಬರು ಪಾರ್ಥ ಚಟರ್ಜಿ ಅವರನ್ನು ಪರಿಚಯಿಸಿದ್ದರು. 2016ರಿಂದ ಇವರಿಬ್ಬರೂ ಪರಸ್ಪರ ಹತ್ತಿರವಾಗಿದ್ದರು.

ಸದ್ಯ ಬಂಧನಕ್ಕೊಳಗಾಗಿರುವ ಪಾರ್ಥ ಮುಖರ್ಜಿ ಅವರನ್ನು ಆಗಸ್ಟ್ 3ರವರೆಗೆ ಇಡಿ ಕಸ್ಟಡಿಗೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.