ADVERTISEMENT

ವಂಚನೆ ಪ್ರಕರಣ: ನಟ ಸೋನು ಸೂದ್ ವಿರುದ್ಧ ಬಂಧನ ವಾರಂಟ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಫೆಬ್ರುವರಿ 2025, 4:08 IST
Last Updated 7 ಫೆಬ್ರುವರಿ 2025, 4:08 IST
ಸೋನು ಸೂದ್
ಸೋನು ಸೂದ್   

ಲೂಧಿಯಾನ(ಪಂಜಾಬ್): ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸೋನು ಸೂದ್ ವಿರುದ್ಧ ಪಂಜಾಬ್ ನ್ಯಾಯಾಲಯವೊಂದು ಬಂಧನ ವಾರಂಟ್ ಹೊರಡಿಸಿದೆ.

ಲೂಧಿಯಾನ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ರಮಣಪ್ರೀತ್ ಕೌರ್ ಅವರು ಈ ವಾರಂಟ್ ಜಾರಿ ಮಾಡಿದ್ದಾರೆ. ಈ ಬಗ್ಗೆ 'ಎನ್‌ಡಿಟಿವಿ' ವರದಿ ಮಾಡಿದೆ.

ಲೂಧಿಯಾನ ಮೂಲದ ವಕೀಲ ರಾಜೇಶ್ ಖನ್ನಾ ಎಂಬುವವರು ಮೋಹಿತ್ ಶುಕ್ಲಾ ವಿರುದ್ಧ ₹10 ಲಕ್ಷ ವಂಚನೆ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ. ನಕಲಿ ರಿಜಿಕಾ ನಾಣ್ಯದಲ್ಲಿ ಹೂಡಿಕೆ ಮಾಡುವಂತೆ ಆಮಿಷವೊಡ್ಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ADVERTISEMENT

ಈ ಪ್ರಕರಣಕ್ಕೆ ಸಂಬಂದಿಸಿದಂತೆ ಸಾಕ್ಷಿ ಹೇಳಲು ಸೋನು ಸೂದ್ ಅವರು ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು. ಗೈರಾದ ಹಿನ್ನೆಲೆ ಬಂಧನ ವಾರಂಟ್ ಹೊರಡಿಸಲಾಗಿದೆ.

ಸೋನು ಸೂದ್ ಅವರನ್ನು ಬಂಧಿಸುವಂತೆ ಮುಂಬೈನ ಅಂಧೇರಿ ಪಶ್ಚಿಮದಲ್ಲಿರುವ ಓಶಿವಾರಾ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿಗೆ ಲೂಧಿಯಾನ ನ್ಯಾಯಾಲಯ ನಿರ್ದೇಶಿಸಿದೆ.

ನ್ಯಾಯಾಲಯಕ್ಕೆ ಹಾಜರಾಗುವಂತೆ ಸೋನು ಸೂದ್ ಅವರಿಗೆ ನಿಯಮಾನುಸಾರ ಸಮನ್ಸ್ ನೀಡಲಾಗಿತ್ತು. ಆದರೆ ಅವರು ನ್ಯಾಯಾಲಯಕ್ಕೆ ಹಾಜರಾಗಿಲ್ಲ. ಹೀಗಾಗಿ ಸೋನು ಸೂದ್ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಆದೇಶಿಸಲಾಗಿದೆ ಎಂದು ಎಂದು ನ್ಯಾಯಾಲಯ ಆದೇಶ ಪ್ರತಿಯಲ್ಲಿ ಉಲ್ಲೇಖಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.