ADVERTISEMENT

ಸಚಿವ ಅರುಣ್ ಜೇಟ್ಲಿಗೆ ಕ್ಯಾನ್ಸರ್?

‘ದಿ ವೈರ್’ ಸುದ್ದಿ ತಾಣ ವರದಿ

​ಪ್ರಜಾವಾಣಿ ವಾರ್ತೆ
Published 16 ಜನವರಿ 2019, 17:19 IST
Last Updated 16 ಜನವರಿ 2019, 17:19 IST
   

ನವದೆಹಲಿ: ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರು ಕ್ಯಾನ್ಸರ್‌ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ್ದಾರೆ ಎಂದು ದಿ ವೈರ್‌ಸುದ್ದಿ ತಾಣ ವರದಿ ಮಾಡಿದೆ.

ಜೇಟ್ಲಿ ತೊಡೆಯಲ್ಲಿ ಗಡ್ಡೆ ಕಾಣಿಸಿಕೊಂಡಿದ್ದು ಅದು ಮೃದು ಅಂಗಾಂಶ ಕ್ಯಾನ್ಸರ್‌ ಎಂದು ಹೇಳಲಾಗಿದೆ. ಬಹು ಬೇಗ ದೇಹದ ಇತರ ಭಾಗಗಳಿಗೆ ವ್ಯಾಪಿಸುತ್ತದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

66 ವರ್ಷದ ಜೇಟ್ಲಿ ಈಗಾಗಲೇ ನ್ಯೂಯಾರ್ಕ್‌ಗೆ ತೆರಳಿದ್ದಾರೆ. ಮೂತ್ರಪಿಂಡ (ಕಿಡ್ನಿ) ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕಳೆದ ಏಪ್ರಿಲ್‌ನಲ್ಲಿ ಏಮ್ಸ್‌ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಆರೋಗ್ಯ ತಪಾಸಣೆಗಾಗಿ ಅವರು ಅಮೆರಿಕಕ್ಕೆ ತೆರಳಿದ್ದಾರೆ ಎಂದು ಮೂಲಗಳು ಮಂಗಳವಾರ ತಿಳಿಸಿದ್ದವು.ಆದರೆ, ಯಾವಾಗ ವಾಪಸ್‌ ಬರಲಿದ್ದಾರೆ ಎಂಬುದನ್ನು ಬಹಿರಂಗಪಡಿಸಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.