ADVERTISEMENT

ಹಣಕಾಸು ಸಚಿವರಾಗಿ ಜೇಟ್ಲಿ ಅಧಿಕಾರ ಸ್ವೀಕಾರ

ಪಿಟಿಐ
Published 15 ಫೆಬ್ರುವರಿ 2019, 18:57 IST
Last Updated 15 ಫೆಬ್ರುವರಿ 2019, 18:57 IST
ಅರುಣ್ ಜೇಟ್ಲಿ
ಅರುಣ್ ಜೇಟ್ಲಿ   

ನವದೆಹಲಿ: ಒಂದು ತಿಂಗಳ ನಂತರ ಅರುಣ್ ಜೇಟ್ಲಿ ಅವರು ಹಣಕಾಸು ಸಚಿವರಾಗಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ್ದ ಅವರು ಕಳೆದ ವಾರ ಮರಳಿದ್ದರು. ಅವರ ಅನುಪಸ್ಥಿತಿಯಲ್ಲಿ ರೈಲ್ವೆ ಸಚಿವ ಪೀಯೂಷ್‌ ಗೋಯಲ್‌ ಹಂಗಾಮಿ ಹಣಕಾಸು ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

’ಹಣಕಾಸು ಸಚಿವಾಲಯದಲ್ಲಿ ಇಂದು ನನ್ನ ಕರ್ತವ್ಯಕ್ಕೆ ಹಾಜರಾಗಿದ್ದೇನೆ. ಸಚಿವಾಲಯದಲ್ಲಿ ಸಮರ್ಥವಾಗಿ ಹಾಗೂ ಶ್ರದ್ಧೆಯಿಂದ ಕಾರ್ಯ ನಿರ್ವಹಿಸಿದ ಶ್ರೀ ಪೀಯೂಷ್‌ ಗೋಯಲ್‌ ಅವರಿಗೆ ಧನ್ಯವಾದ‘ ಎಂದು ಜೇಟ್ಲಿ ಟ್ವೀಟ್‌ ಮಾಡಿದ್ದಾರೆ.

ಪುಲ್ವಾಮಾ ಜಿಲ್ಲೆಯಲ್ಲಿ ಗುರುವಾರ ನಡೆದ ಭಯೋತ್ಪಾದಕರ ದಾಳಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮೊದಲು ಪಾಲ್ಗೊಂಡ ಅವರು ನಂತರ ಹಣಕಾಸು ಸಚಿವಾಲಯಕ್ಕೆ ತೆರಳಿ, ಅಧಿಕಾರ ಸ್ವೀಕರಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.