ಇಟಾನಗರ: ಅರುಣಾಚಲ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಉಂಟಾಗಿದೆ. ಮಳೆ ಹಾಗೂ ಭೂಕುಸಿತದಲ್ಲಿ ಮೃತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (ಎಸ್‌ಇಒಸಿ) ಪ್ರಕಾರ, 23 ಜಿಲ್ಲೆಗಳ 156 ಗ್ರಾಮಗಳ 938 ಜನರು ಪ್ರವಾಹದಿಂದಾಗಿ ತೊಂದರೆಗೆ ಒಳಗಾಗಿದ್ದಾರೆ.
ಲೋಹಿತ್ ಜಿಲ್ಲೆಯಲ್ಲಿ ಪ್ರವಾಹಕ್ಕೆ ಸಿಲುಕಿದ್ದ ಒಬ್ಬರ ಮೃತದೇಹವನ್ನು ಹೊರತೆರೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಲವು ಪ್ರದೇಶಗಳಲ್ಲಿ ಭೂಕುಸಿತ ವರದಿಯಾಗಿದೆ. ಭೂಕುಸಿತ ಸಾಧ್ಯತೆಯಿರುವ ಪ್ರದೇಶಗಳಲ್ಲಿ ಜನರು ಜಾಗರೂಕರಾಗಿರುವಂತೆ ಸೂಚಿಸಲಾಗಿದೆ. ಜನರಿಗೆ ಸೂಕ್ತ ನಿರ್ದೇಶನಗಳನ್ನು ನೀಡುವಂತೆಯೂ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ.
ರಾಜ್ಯದಲ್ಲಿ ಬಹುತೇಕ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಇದರಿಂದಾಗಿ ಪ್ರವಾಹದ ಸ್ಥಿತಿ ಉಂಟಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.