ADVERTISEMENT

ಗಡಿ ರಸ್ತೆ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ರಾಜನಾಥ್ ಸಿಂಗ್

​ಪ್ರಜಾವಾಣಿ ವಾರ್ತೆ
Published 17 ಜುಲೈ 2020, 21:12 IST
Last Updated 17 ಜುಲೈ 2020, 21:12 IST
ಅರುಣಾಚಲ ಪ್ರದೇಶದ ಗಡಿಯಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ
ಅರುಣಾಚಲ ಪ್ರದೇಶದ ಗಡಿಯಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ   

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ‘ಗಡಿ ರಸ್ತೆಗಳ ಸಂಸ್ಥೆ’ (ಬಿಆರ್‌ಒ) ಕೈಗೊಂಡಿರುವ ಮೂಲಸೌಕರ್ಯ ಯೋಜನೆಗಳ ಪ್ರಗತಿಯ ಪರಾಮರ್ಶೆ ನಡೆಸಿದರು.

ಬಿಆರ್‌ಒ ಮಹಾ ನಿರ್ದೇಶಕರಾದ ಲೆಫ್ಟಿನೆಂಟ್ ಜನರಲ್ ಹರ್ಪಾಲ್ ಸಿಂಗ್, ಅರುಣಾಚಲ ಪ್ರದೇಶ ಸರ್ಕಾರದ ಮುಖ್ಯಕಾರ್ಯದರ್ಶಿ ನರೇಶ್ ಕುಮಾರ್ ಹಾಗೂ ನಾಲ್ಕು ಯೋಜನೆಗಳ ಮುಖ್ಯ ಎಂಜಿನಿಯರ್‌ಗಳು ವಿಡಿಯೊ ಸಂವಾದದಲ್ಲಿ ಭಾಗಿಯಾಗಿದ್ದರು.ರಾಜ್ಯದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಕಾಮಗಾರಿಗಳ ಪ್ರಗತಿಯನ್ನು ತಿಳಿಯುವುದು ಸಭೆಯ ಉದ್ದೇಶವಾಗಿತ್ತು.

ಭೂಸ್ವಾಧೀನ, ಅರಣ್ಯ ಇಲಾಖೆ ಅನುಮೋದನೆ, ಕ್ವಾರಿಗಳ ಹಂಚಿಕೆ, ಜಂಟಿ ಸಮೀಕ್ಷೆ ಮೊದಲಾದ ವಿಷಯಗಳು ಚರ್ಚೆಗೆ ಬಂದವು. ಪ್ರತಿ ಯೋಜನೆ ಪೂರ್ಣಗೊಳಿಸಲು ಕಾಲಮಿತಿಯನ್ನು ನಿಗದಿಪಡಿಸಲಾಯಿತು. ಗಡಿರಸ್ತೆ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಸರ್ಕಾರದ ಎಲ್ಲ ಇಲಾಖೆಗಳು ಸಹಕಾರ ನೀಡಲಿವೆ ಎಂದು ಮುಖ್ಯಕಾರ್ಯದರ್ಶಿ ಅವರು ಸಭೆಯಲ್ಲಿ ಭರವಸೆ ನೀಡಿದರು. ಸಭೆ ಫಲಪ್ರದವಾಗಿತ್ತು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.