
ಪಿಟಿಐ
ಇಟಾನಗರ: ಅರುಣಾಚಲ ಪ್ರದೇಶದ ಚಾಂಗ್ಲಾಂಗ್ ಜಿಲ್ಲೆಯಲ್ಲಿ ಶೋಧ ಕಾರ್ಯಾಚರಣೆ ವೇಳೆ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳು ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದರು.
ಮಾಹಿತಿ ಮೇರೆಗೆ ಅಸ್ಸಾಂ ರೈಫಲ್ಸ್ ಘಟಕವು ಶೋಧ ಕಾರ್ಯಾಚರಣೆ ನಡೆಸಿದೆ. ಶಸ್ತ್ರಾಸ್ತ್ರಗಳ ಮೂಲ ಹಾಗೂ ಅವುಗಳ ಉದ್ದೇಶಿತ ಬಳಕೆಯನ್ನು ಪತ್ತೆ ಹಚ್ಚಲು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.