ADVERTISEMENT

ದೆಹಲಿ ಹಿಂಸಾಚಾರ: ಅಂಕಿತ್ ಶರ್ಮಾ ಕುಟುಂಬಕ್ಕೆ ₹1 ಕೋಟಿ ಘೋಷಿಸಿದ ಕೇಜ್ರಿವಾಲ್

ಏಜೆನ್ಸೀಸ್
Published 2 ಮಾರ್ಚ್ 2020, 10:07 IST
Last Updated 2 ಮಾರ್ಚ್ 2020, 10:07 IST
ಅರವಿಂದ  ಕೇಜ್ರಿವಾಲ್
ಅರವಿಂದ ಕೇಜ್ರಿವಾಲ್   

ನವದೆಹಲಿ:ದೆಹಲಿ ಹಿಂಸಾಚಾರದಲ್ಲಿ ಸಿಲುಕಿ ಸಾವಿಗೀಡಾಗಿದ್ದಗುಪ್ತಚರ ಇಲಾಖೆ ಅಧಿಕಾರಿ ಅಂಕಿತ್ ಶರ್ಮಾ ಕುಟುಂಬಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ₹1 ಕೋಟಿ ಘೋಷಣೆ ಮಾಡಿದ್ದಾರೆ. ಇದರ ಜತೆಗೆ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ನೌಕರಿ ನೀಡುವುದಾಗಿ ಭರವಸೆ ನೀಡಿದ್ದಾರೆ.

ಫೆ.26ರಂದು ಈಶಾನ್ಯ ದೆಹಲಿಯಜಾಫರ್‌ಬಾದ್‌ನ ಚರಂಡಿಯಲ್ಲಿ ಶರ್ಮಾ ಅವರ ಮೃತದೇಹ ಪತ್ತೆಯಾಗಿತ್ತು.

ಶರ್ಮಾ ಅವರ ಅಪ್ಪ ರವೀಂದ್ರ ಶರ್ಮಾ ಕೇಂದ್ರ ಗುಪ್ತಚರವಿಭಾಗದ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಆಮ್ ಆದ್ಮಿ ಪಕ್ಷದ ನಾಯಕ ತಾಹೀರ್ ಹುಸೇನ್ ಬೆಂಬಲಿಗರು ಈ ಕೃತ್ಯವೆಸಗಿದ್ದಾರೆ ಎಂದು ಆರೋಪಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.