ADVERTISEMENT

ದೆಹಲಿ ಹಿಂಸಾಚಾರ: ಮೃತರ ಕುಟುಂಬಸ್ಥರಿಗೆ ₹10 ಲಕ್ಷ ಪರಿಹಾರ ಘೋಷಿಸಿದ ಕೇಜ್ರಿವಾಲ್‌

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2020, 14:42 IST
Last Updated 27 ಫೆಬ್ರುವರಿ 2020, 14:42 IST
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಮತ್ತು ಉಪ ಮುಖ್ಯಮಂತ್ರಿ ಮನೀಷ್‌ ಸಿಸೋಡಿಯಾ
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಮತ್ತು ಉಪ ಮುಖ್ಯಮಂತ್ರಿ ಮನೀಷ್‌ ಸಿಸೋಡಿಯಾ   

ನವದೆಹಲಿ: ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ ₹10 ಲಕ್ಷ, ಮನೆ ಕಳೆದುಕೊಂಡವರಿಗೆ ತಲಾ ₹5 ಲಕ್ಷ ಪರಿಹಾರ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ತಿಳಿಸಿದ್ದಾರೆ.

ಗುರುವಾರ ಮಾಧ್ಯಮ ಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ‘ಗಲಭೆ ಸಂತ್ರಸ್ತರಿಗೆ ಆಸರೆ ನೀಡಲು ರಾಜ್ಯ ಸರ್ಕಾರವು ಸೂಕ್ತ ಕ್ರಮ ಕೈಗೊಳ್ಳಲಿದೆ. ಗಲಭೆಯಲ್ಲಿ ಸಾವಿಗೀಡಾದವರ ಕುಟುಂಬದವರಿಗೆ ತಲಾ ₹ 10 ಲಕ್ಷ, ಮನೆ ಕಳೆದುಕೊಂಡವರಿಗೆ ₹5 ಲಕ್ಷಗಳನ್ನು ಸರ್ಕಾರ ನೀಡಲಿದೆ’ ಎಂದಿದ್ದಾರೆ.

ಗಲಭೆಯಲ್ಲಿ ಗಾಯಗೊಂಡವರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಅಂತವರ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಕೇಜ್ರಿವಾಲ್‌ ತಿಳಿಸಿದ್ದಾರೆ.

ADVERTISEMENT

‘ತಪ್ಪಿತಸ್ಥರು ಯಾರೇ ಆಗಿರಲಿ ಅಂತವರಿಗೆ ಶಿಕ್ಷೆಯಾಗಬೇಕು. ಒಂದು ವೇಳೆ ಆಮ್‌ ಆದ್ಮಿ ಪಕ್ಷದ ಯಾವುದೇ ಮುಖಂಡ ತಪ್ಪು ಮಾಡಿದ್ದರೆ, ಅಂತವರಿಗೆ ಎರಡು ಪಟ್ಟು ಶಿಕ್ಷೆಯಾಗಲಿ. ಈ ವಿಚಾರದಲ್ಲಿ ಯಾವುದೇ ರಾಜಕೀಯ ಬೇಡ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.