ADVERTISEMENT

ನಾನು ಭ್ರಷ್ಟ ಅಲ್ಲ, ಪ್ರಾಮಾಣಿಕ ಎಂದು ಬಿಕ್ಕಿ ಬಿಕ್ಕಿ ಅತ್ತ ಅರವಿಂದ ಕೇಜ್ರಿವಾಲ್‌

ಏಜೆನ್ಸೀಸ್
Published 27 ಫೆಬ್ರುವರಿ 2026, 10:55 IST
Last Updated 27 ಫೆಬ್ರುವರಿ 2026, 10:55 IST
<div class="paragraphs"><p>ಅರವಿಂದ ಕೇಜ್ರಿವಾಲ್‌</p></div>

ಅರವಿಂದ ಕೇಜ್ರಿವಾಲ್‌

   

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

ನ್ಯಾಯಾಲಯದ ಆವರಣದಲ್ಲಿ ಮಾಧ್ಯಮಗಳ ಎದುರು ಮಾತನಾಡುತ್ತ ಅವರು ಬಿಕ್ಕಿ ಬಿಕ್ಕಿ ಅತ್ತರು. ನಾನು ಭ್ರಷ್ಟ ಅಲ್ಲ, ನಾನು ಮತ್ತು ಸಿಸೋಡಿಯಾ ಪ್ರಾಮಾಣಿಕರು ಎಂದು ನ್ಯಾಯಾಲಯ ಹೇಳಿದೆ ಎಂದು ಕೇಜ್ರಿವಾಲ್ ಅಳುತ್ತ ಹೇಳಿದರು.

ADVERTISEMENT

ಮಾಧ್ಯಮ ಪ್ರತಿನಿಧಿಗಳ ಬಳಿ ಮಾತು ಆರಂಭಿಸುವ ಮುನ್ನ ಅವರಿಗೆ ದುಃಖ ಉಮ್ಮಳಿಸಿ ಬಂತು. ಬಿಕ್ಕಿ ಬಿಕ್ಕಿ ಅತ್ತ ಅವರನ್ನು ಸಿಸೋಡಿಯಾ ಸಂತೈಸಿದರು. 

ಕೇಜ್ರಿವಾಲ್‌ ಬಳಿ ನೆರೆದಿದ್ದ ಅಭಿಮಾನಿಗಳು, ನೀವು ಭ್ರಷ್ಟರಲ್ಲ, ಪ್ರಾಮಾಣಿಕರು ಸತ್ಯ ಗೆದ್ದಿದೆ ಎಂದು ಹೇಳಿದರು. 

ಪ್ರಕರಣ... 

2022ರಲ್ಲಿ ಸಿಬಿಐ ಮೊದಲ ಚಾರ್ಜ್‌ಶೀಟ್ ಅನ್ನು ಸಲ್ಲಿಸಿತ್ತು. ಪ್ರಕರಣದಲ್ಲಿ ಕೇಜ್ರಿವಾಲ್, ಸಿಸೋಡಿಯಾ, ಕೆ. ಕವಿತಾ, ಕುಲದೀಪ್ ಸಿಂಗ್, ನರೇಂದರ್ ಸಿಂಗ್, ವಿಜಯ್ ನಾಯರ್, ಅಭಿಷೇಕ್ ಬೋಯಿನಪಲ್ಲಿ, ಅರುಣ್ ರಾಮಚಂದ್ರ ಪಿಳ್ಳೈ, ಮೂತ ಗೌತಮ್, ಸಮೀರ್ ಮಹೇಂದ್ರು, ಅಮನದೀಪ್ ಸಿಂಗ್ ಧಲ್, ಅರ್ಜುನ್ ಪಾಂಡೆ, ಬುಚ್ಚಿಬಾಬು ಗೋರ್ನತ್ಲಾ, ರಾಜಮೋದೇಶ್ ಪ್ರಸಾದ್ ಶರ್ಮಾ, ರಾಕೇಶ ಪ್ರಸಾದ್ ಜೊನತ್ಲಾ, ರಾಕೇಶ ಪ್ರಸಾದ್ ಜೊನತ್ಲಾ ಸೇರಿದಂತೆ ಒಟ್ಟು 23 ಆರೋಪಿಗಳನ್ನು ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ರಾಯತ್, ಅರವಿಂದ್ ಕುಮಾರ್ ಸಿಂಗ್, ದುರ್ಗೇಶ್ ಪಾಠಕ್, ಅಮಿತ್ ಅರೋರಾ, ವಿನೋದ್ ಚೌಹಾಣ್, ಆಶಿಶ್ ಮಾಥುರ್, ಮತ್ತು ಪಿ ಶರತ್ ಚಂದ್ರಾ ರೆಡ್ಡಿ ಹೆಸರು ತಳುಕು ಹಾಕಿಕೊಂಡಿತ್ತು.

2024ರ ಮಾರ್ಚ್‌ನಲ್ಲಿ ದೆಹಲಿ ಅಬಕಾರಿ ನೀತಿ ಹಗರಣ ಜೊತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಆರೋಪದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು (ಇ.ಡಿ) ಅರವಿಂದ ಕೇಜ್ರಿವಾಲ್‌ ಅವರನ್ನು ಬಂಧಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.