ನವದೆಹಲಿ: ದೆಹಲಿಯಲ್ಲಿ ಆಮ್ ಆದ್ಮಿಪಕ್ಷದ ಕೇಜ್ರಿವಾಲ್ ಅಧಿಕಾರಕ್ಕೆ ಬಂದರೆ, ಅದು ಅಭಿವೃದ್ಧಿಯನ್ನು ಗುರುತಿಸಿ ಮತದಾರ ನೀಡಿದ ತೀರ್ಪು ಎಂದು ದೆಹಲಿಯ ಕಾಂಗ್ರೆಸ್ ಮುಖಂಡ ಎ.ಆರ್.ಚೌದರಿ ಅಭಿಪ್ರಾಯಪಟ್ಟಿದ್ದಾರೆ.
ಚುನಾವಣೋತ್ತರ ಸಮೀಕ್ಷೆಗಳಲ್ಲಿ ಆಮ್ ಆದ್ಮಿ ಪಕ್ಷದ ಕೇಜ್ರಿವಾಲ್ ಮತ್ತೆ ಅಧಿಕಾರಕ್ಕೆ ಬರುತ್ತಾರೆ ಎಂದು ವರದಿ ಬಂದ ನಂತರ ಸುದ್ದಿಗಾರರೊಂದಿಗೆ ಅವರು ಈ ವಿಷಯ ತಿಳಿಸಿದ್ದಾರೆ.
ಈ ಬಾರಿಯ ದೆಹಲಿ ಚುನಾವಣೆಯಲ್ಲಿ ನಮ್ಮೆಲ್ಲಾ ಶ್ರಮವನ್ನು ಹಾಕಿದ್ದೇವೆ. ಬಿಜೆಪಿ ಎಲ್ಲಾ ಕೋಮುವಾದ ಕಾರ್ಯಸೂಚಿಗಳನ್ನು ಮುಂದಿಟ್ಟುಕೊಂಡು ಪ್ರಚಾರ ಮಾಡಿದೆ. ಆಮ್ ಆದ್ಮಿ ಪಕ್ಷದ ಕೇಜ್ರಿವಾಲ್ಅಭಿವೃದ್ಧಿಯನ್ನು ಮುಂದಿಟ್ಟುಕೊಂಡು ಮತಕೇಳಿದ್ದರು. ಒಂದು ವೇಳೆ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಅದು ಜನರು ಅಭಿವೃದ್ಧಿಯನ್ನು ಆಯ್ಕೆ ಮಾಡಿಕೊಂಡಂತೆಎಂದು ಎ.ಆರ್. ಚೌದರಿ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.