ADVERTISEMENT

ಬದಲಾವಣೆ ತರುವೆ ಎಂದವರೇ ಹಗರಣದಲ್ಲಿ ಸಿಲುಕಿದ್ದಾರೆ: ಕೇಜ್ರಿವಾಲ್ ವಿರುದ್ಧ ಸ್ಮೃತಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಫೆಬ್ರುವರಿ 2025, 10:36 IST
Last Updated 8 ಫೆಬ್ರುವರಿ 2025, 10:36 IST
<div class="paragraphs"><p> ಸ್ಮೃತಿ ಇರಾನಿ ಮತ್ತು ಅರವಿಂದ ಕೇಜ್ರಿವಾಲ್</p></div>

ಸ್ಮೃತಿ ಇರಾನಿ ಮತ್ತು ಅರವಿಂದ ಕೇಜ್ರಿವಾಲ್

   

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತದತ್ತ ಸಾಗಿದ್ದು, 26 ವರ್ಷಗಳ ಬಳಿಕ ಬಿಜೆಪಿ ದೆಹಲಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ.

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ಸಂತಸ ಮೂಡಿಸಿದೆ ಎಂದು ಬಿಜೆಪಿ ನಾಯಕಿ ಸ್ಮೃತಿ ಇರಾನಿ ಹರ್ಷ ವ್ಯಕ್ತಪಡಿಸಿದ್ದಾರೆ.

ADVERTISEMENT

‘ದೇಶದ ರಾಜಕೀಯ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಸಲುವಾಗಿ ತಾವು ರಾಜಕೀಯಕ್ಕೆ ಸೇರಿರುವುದಾಗಿ ಎಎಪಿ ನಾಯಕ ಅರವಿಂದ ಕೇಜ್ರಿವಾಲ್ ಭರವಸೆ ನೀಡಿದ್ದರು. ಆದರೆ, ಅವರೇ ಅಬಕಾರಿ ಹಗರಣದಲ್ಲಿ ಆರೋಪಿಯಾಗಿದ್ದಾರೆ’ ಎಂದು ಬಿಜೆಪಿ ಮಾಜಿ ಸಂಸದೆ ಸ್ಮೃತಿ ಇರಾನಿ ಟೀಕಿಸಿದ್ದಾರೆ.

‘ಕೇಜ್ರಿವಾಲ್‌ ಅವರು ಬಿಜೆಪಿ ಮತ್ತು ಪ್ರಧಾನಿ ಮೋದಿಯವರ ಅಭಿವೃದ್ಧಿ ಕಾರ್ಯಗಳನ್ನು ವಿರೋಧಿಸಿದ್ದರು. ಆದರೆ, ಪ್ರಧಾನಿ ಮೋದಿಯವರ ನಾಯಕತ್ವ ಮತ್ತು ಉತ್ತಮ ಆಡಳಿತದಲ್ಲಿ ನಂಬಿಕೆ ಹೊಂದಿರುವ ದೆಹಲಿಯ ಮತದಾರರನ್ನು ನಾನು ಅಭಿನಂದಿಸುತ್ತೇನೆ’ ಎಂದು ಸ್ಮೃತಿ ತಿಳಿಸಿದ್ದಾರೆ.

ಸ್ಮೃತಿ ಇರಾನಿ ಅವರು 2024ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಅಮೇಠಿ ಕ್ಷೇತ್ರದಲ್ಲಿ ಪರಾಭವಗೊಂಡಿದ್ದರು.

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಸ್ಮೃತಿ ಇರಾನಿ ಅವರಿಗೆ ಬಿಜೆಪಿ ಟಿಕೆಟ್ ನೀಡುವ ಸಾಧ್ಯತೆ ಇದೆ ಎನ್ನಲಾಗಿತ್ತು. ಅಂತಿಮ ಕ್ಷಣದಲ್ಲಿ ಪಕ್ಷ ನಿರ್ಧಾರವನ್ನು ಬದಲಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.