ADVERTISEMENT

‘ಮೇಕ್‌ ಇಂಡಿಯಾ ನಂ.1’ ಮಿಷನ್‌ಗೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ಚಾಲನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಆಗಸ್ಟ್ 2022, 18:27 IST
Last Updated 17 ಆಗಸ್ಟ್ 2022, 18:27 IST
ಅರವಿಂದ ಕೇಜ್ರಿವಾಲ್‌
ಅರವಿಂದ ಕೇಜ್ರಿವಾಲ್‌   

ನವದೆಹಲಿ: 2024ರ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಆಮ್‌ ಆದ್ಮಿ ಪಕ್ಷವು (ಆ‍ಪ್‌) ಜನರನ್ನು ತಲುಪುವ ಸಲುವಾಗಿ‘ಮೇಕ್‌ ಇಂಡಿಯಾ ನಂ.1’ ಕಾರ್ಯಕ್ರಮ ಹಮ್ಮಿಕೊಂಡಿದೆ. ಆಪ್‌ ಸ್ಥಾಪಕರೂ ಆಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಬುಧವಾರ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.

‘ವಿಶ್ವದಲ್ಲಿ ಭಾರತವನ್ನು ಅಗ್ರಪಟ್ಟಕ್ಕೇರಿಸುವುದು ಈ ಕಾರ್ಯಕ್ರಮದ ಉದ್ದೇಶ. ಬಿಜೆಪಿ, ಕಾಂಗ್ರೆಸ್‌ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಹಾಗೂ ನಾಗರಿಕರು ಈ ಕಾರ್ಯಕ್ಕೆ ಕೈಜೋಡಿಸಬೇಕು’ ಎಂದು ಕೇಜ್ರಿವಾಲ್‌ ಹೇಳಿದ್ದಾರೆ.

ತಾಲಕ್‌ಟೋರಾ ಕ್ರೀಡಾಂಗಣದಲ್ಲಿ ಆಯೋಜನೆಯಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಉತ್ತಮ ಆಡಳಿತದ ಕುರಿತು ತಾವು ಹೊಂದಿರುವ ದೃಷ್ಟಿಕೋನವನ್ನು ಹಂಚಿಕೊಂಡರು.

ADVERTISEMENT

‘ಇದು ರಾಜಕೀಯ ಪಕ್ಷವೊಂದರ ಕಾರ್ಯಕ್ರಮವಲ್ಲ. ಇದು ರಾಷ್ಟ್ರೀಯ ‘ಮಿಷನ್‌’. ಸಿಂಗಪುರ ಸೇರಿದಂತೆ ಇತರೆ ಕೆಲ ರಾಷ್ಟ್ರಗಳಿಗೆ ಭಾರತದ ನಂತರ ಸ್ವಾತಂತ್ರ್ಯ ಸಿಕ್ಕಿತ್ತು. ಆದರೆ ಅಭಿವೃದ್ಧಿ ವಿಚಾರದಲ್ಲಿ ಅವು ನಮಗಿಂತಲೂ ಮುಂದಿವೆ’ ಎಂದರು. ‘ಕಾರ್ಯಕ್ರಮದಲ್ಲಿ ನಾಗರಿಕರ ಪಾಲ್ಗೊಳ್ಳುವಿಕೆ ಉತ್ತೇಜಿಸುವ ಹಾಗೂ ಆ ಮೂಲಕ ನಿಗದಿತ ಗುರಿ ಸಾಧಿಸುವ ಸಲುವಾಗಿ ದೇಶದಾದ್ಯಂತ ಪ್ರವಾಸ ಕೈಗೊಳ್ಳುತ್ತೇನೆ’ ಎಂದೂ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.