ADVERTISEMENT

ಎಎಪಿ ರಾಷ್ಟ್ರೀಯ ಸಂಚಾಲಕರಾಗಿ ಕೇಜ್ರಿವಾಲ್ ಪುನರಾಯ್ಕೆ

ಪಿಟಿಐ
Published 12 ಸೆಪ್ಟೆಂಬರ್ 2021, 8:34 IST
Last Updated 12 ಸೆಪ್ಟೆಂಬರ್ 2021, 8:34 IST
ಅರವಿಂದ ಕೇಜ್ರಿವಾಲ್‌
ಅರವಿಂದ ಕೇಜ್ರಿವಾಲ್‌   

ವದೆಹಲಿ: ಆಮ್‌ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕರಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಪುನರಾಯ್ಕೆಯಾಗಿದ್ದಾರೆ.

ಭಾನುವಾರ ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಈ ಆಯ್ಕೆ ನಡೆಯಿತು ಎಂದು ಮೂಲಗಳು ತಿಳಿಸಿವೆ.

ಪಕ್ಷದ ನಾಯಕರಾದ ಪಂಕಜ್ ಗುಪ್ತಾ ಮತ್ತು ಎನ್.ಡಿ.ಗುಪ್ತಾ ಅವರು ಕ್ರಮವಾಗಿ ಕಾರ್ಯದರ್ಶಿ ಮತ್ತು ಖಜಾಂಚಿಯಾಗಿ ಆಯ್ಕೆಯಾದರು.ಮಂಡಳಿಯು ಕೇಜ್ರಿವಾಲ್‌ ಸೇರಿದಂತೆ 34 ಕಾರ್ಯಕಾರಿ ಸಮಿತಿ ಸದಸ್ಯರನ್ನು ಶನಿವಾರ ಆಯ್ಕೆ ಮಾಡಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.