ADVERTISEMENT

ದೆಹಲಿ ವಿ.ವಿ ಕಾಯ್ದೆಗೆ ತಿದ್ದುಪಡಿಗೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮನವಿ

ಪಿಟಿಐ
Published 16 ಅಕ್ಟೋಬರ್ 2020, 11:13 IST
Last Updated 16 ಅಕ್ಟೋಬರ್ 2020, 11:13 IST
ಅರವಿಂದ ಕೇಜ್ರಿವಾಲ್
ಅರವಿಂದ ಕೇಜ್ರಿವಾಲ್   

ನವದೆಹಲಿ: ಹೊಸ ಕಾಲೇಜುಗಳ ಸ್ಥಾಪನೆಗೆ ಪೂರಕವಾಗಿ ದೆಹಲಿ ವಿಶ್ವವಿದ್ಯಾಲಯದ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯವಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅಭಿಪ್ರಾಯಪಟ್ಟಿದ್ದಾರೆ. ಈ ಬಗ್ಗೆ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರಿಗೆ ಪತ್ರ ಬರೆದಿದ್ದಾರೆ.

ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಅವಕಾಶಗಳನ್ನು ಕಲ್ಪಿಸುವ ಕ್ರಮವಾಗಿ ಹೆಚ್ಚಿನ ಕಾಲೇಜು ಮತ್ತು ವಿಶ್ವವಿದ್ಯಾಲಯಗಳನ್ನು ಸ್ಥಾಪಿಸುವ ಅಗತ್ಯವಿದೆ ಪ್ರತಿಪಾದಿಸಿದರು.

ದೆಹಲಿಯಲ್ಲಿ ಪ್ರತಿವರ್ಷ ಸರಾಸರಿ 2.5 ಲಕ್ಷ ವಿದ್ಯಾರ್ಥಿಗಳು 12ನೇ ತರಗತಿ ಉತ್ತೀರ್ಣರಾಗುತ್ತಿದ್ದಾರೆ. ಇವರ ಪೈಕಿ ಸದ್ಯ 1.25 ಲಕ್ಷ ವಿದ್ಯಾರ್ಥಿಗಳಷ್ಟೇ ಕಾಲೇಜುಗಳಲ್ಲಿ ಪ್ರವೇಶ ಪಡೆಯುತ್ತಿದ್ದಾರೆ. ಸದ್ಯ 91 ಕಾಲೇಜುಗಳು ದೆಹಲಿ ವಿಶ್ವವಿದ್ಯಾಲಯದ ಮಾನ್ಯತೆ ಪಡೆದಿವೆ. ವೃತ್ತಿ ಶಿಕ್ಷಣ ಪದವಿ ನೀಡುವ ಇಂದ್ರಪ್ರಸ್ಥ ವಿಶ್ವವಿದ್ಯಾಲಯದ ವ್ಯಾಪ್ತಿಗೆ 127 ಕಾಲೇಜುಗಳು, ಶಿಕ್ಷಣ ಸಂಸ್ಥೆಗಳು ಬರುತ್ತವೆ ಎಂದು ಅವರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.