ADVERTISEMENT

16ಕ್ಕೆ ಕೇಜ್ರಿವಾಲ್‌ ಪ್ರಮಾಣ ವಚನ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2020, 19:49 IST
Last Updated 12 ಫೆಬ್ರುವರಿ 2020, 19:49 IST
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್   

ನವದೆಹಲಿ: ಅರವಿಂದ ಕೇಜ್ರಿವಾಲ್‌ ಅವರು ಮೂರನೇ ಬಾರಿಗೆ ದೆಹಲಿ ಮುಖ್ಯಮಂತ್ರಿಯಾಗಿ ಇದೇ 16ರಂದು ಇಲ್ಲಿನ ರಾಮಲೀಲಾ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಅವರೊಂದಿಗೆ ಸಚಿವ ಸಂಪುಟದ ಸದಸ್ಯರೂ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಎಎಪಿ ನಾಯಕ ಮನೀಶ್‌ ಸಿಸೋಡಿಯಾ ಬುಧವಾರ ತಿಳಿಸಿದರು.

ವಿಧಾನಸಭಾ ಚುನಾವಣೆಯಲ್ಲಿ ಆಯ್ಕೆಯಾದ ಎಎಪಿ ಶಾಸಕರೊಂದಿಗೆ ಕೇಜ್ರಿವಾಲ್‌ ತಮ್ಮ ನಿವಾಸದಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಎಲ್ಲ ಶಾಸಕರು ಕೇಜ್ರಿವಾಲ್‌ ಅವರನ್ನು ಎಎಪಿ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.