ನವದೆಹಲಿ: ಕೊರೊನಾ ವೈರಸ್‌ನ ಹೊಸ ರೂಪಾಂತರಿ ತಳಿ ‘ಓಮಿಕ್ರಾನ್’ ಸೋಂಕು ಪ್ರಕರಣಗಳು ವರದಿಯಾಗಿರುವ ದೇಶಗಳಿಂದ ಭಾರತಕ್ಕೆ ವಿಮಾನ ಸಂಚಾರ ಸ್ಥಗಿತಗೊಳಿಸಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶನಿವಾರ ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಕೋವಿಡ್–19 ಪಿಡುಗಿನಿಂದ ದೇಶ ಬಹಳ ಕಷ್ಟದಿಂದ ಚೇತರಿಸಿಕೊಂಡಿದೆ. ಹೀಗಾಗಿ ಈಗ ವೈರಸ್‌ನ ಹೊಸ ತಳಿ ಸೋಂಕು ಪ್ರಸರಣವಾಗದಂತೆ ತಡೆಯಲು ಸಾಧ್ಯವಾದ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.