ADVERTISEMENT

ರೈತರ ತ್ಯಾಗ ಅಮರ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್

ಪಿಟಿಐ
Published 19 ನವೆಂಬರ್ 2021, 7:40 IST
Last Updated 19 ನವೆಂಬರ್ 2021, 7:40 IST
ಅರವಿಂದ ಕೇಜ್ರಿವಾಲ್
ಅರವಿಂದ ಕೇಜ್ರಿವಾಲ್   

ನವದೆಹಲಿ: ಮೂರು ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರವನ್ನು ಸ್ವಾಗತಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಈ ಕಾಯ್ದೆಗಳ ರದ್ದತಿಗಾಗಿ ಹೋರಾಡಿ ಮೃತಪಟ್ಟ ರೈತರ ‘ತ್ಯಾಗ’ ಅಮರವಾಗಿರುತ್ತದೆ ಎಂದು ಹೇಳಿದ್ದಾರೆ.

‘ಪ್ರಕಾಶ್ ದಿವಸ್‌’ದಂದು ಇಂಥ ಉತ್ತಮ ಸುದ್ದಿಯೊಂದು ಹೊರಬಿದ್ದಿದೆ. ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಈ ಬೇಡಿಕೆ ಈಡೇರಿಕೆಗಾಗಿ 700 ರೈತರು ಹುತಾತ್ಮರಾಗಿದ್ದಾರೆ. ಅವರ ತ್ಯಾಗ ಅಮರವಾಗಿರುತ್ತದೆ. ದೇಶದ ರೈತರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಕೃಷಿ ಮತ್ತು ರೈತರನ್ನು ಹೇಗೆ ಉಳಿಸಿದರು ಎಂಬುದನ್ನು ಮುಂದಿನ ಪೀಳಿಗೆ ನೆನಪಿಸಿಕೊಳ್ಳುತ್ತದೆ. ನನ್ನ ದೇಶದ ರೈತರಿಗೆ ಗೌರವ ನಮನಗಳು’ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಇನ್ನಷ್ಟು...

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.