ನವದೆಹಲಿ: ದೆಹಲಿ ಮುಖ್ಯಮಂತ್ರಿಗಳ ಅಧಿಕೃತ ನಿವಾಸ 'ಶೀಶ್ ಮಹಲ್' ನವೀಕರಣಕ್ಕೆ ಮಾಡಲಾಗಿರುವ ವೆಚ್ಚದ ಕುರಿತು ಸಮಗ್ರ ತನಿಖೆ ನಡೆಸುವಂತೆ ಕೇಂದ್ರ ಜಾಗೃತ ಆಯೋಗವು (ಸಿವಿಸಿ) ಲೋಕೋಪಯೋಗಿ ಇಲಾಖೆಗೆ ನಿರ್ದೇಶನ ನೀಡಿದೆ ಎಂದು ಬಿಜೆಪಿ ನಾಯಕ ವಿಜೇಂದರ್ ಗುಪ್ತಾ ಶನಿವಾರ ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶೀಶ್ ಮಹಲ್‌ನಲ್ಲಿ 2015ರಿಂದ 2024ರ ಅಕ್ಟೋಬರ್‌ವರೆಗೆ ವಾಸವಿದ್ದರು.
ವಿಜೇಂದರ್ ಗುಪ್ತಾ ಹೇಳಿಕೆ ಸಂಬಂಧ ಆಮ್ ಆದ್ಮಿ ಪಕ್ಷ (ಎಎಪಿ) ಅಥವಾ ಕೇಜ್ರಿವಾಲ್ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ರಾಷ್ಟ್ರ ರಾಜಧಾನಿ ವಿಧಾನಸಭಾ ಕ್ಷೇತ್ರಗಳಿಗೆ ಇತ್ತೀಚೆಗೆ ನಡೆದ ಚುನಾವಣೆ ಸಂದರ್ಭದಲ್ಲಿ, ಸಿಎಂ ನಿವಾಸ ನವೀಕರಣ ವಿಚಾರ ಚರ್ಚೆಯಾಗಿತ್ತು. ನವೀಕರಣದ ವೇಳೆ ಭಾರಿ ಅಕ್ರಮ ನಡೆದಿದೆ ಎಂದು ಪ್ರಚಾರದುದ್ದಕ್ಕೂ ವಾಗ್ದಾಳಿ ನಡೆಸಿದ್ದ ಬಿಜೆಪಿ, ಎಎಪಿ ನಾಯಕ ಕೇಜ್ರಿವಾಲ್ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಮಾಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.