
ಪಿಟಿಐ
ಸುನೀತಾ ಕೇಜ್ರಿವಾಲ್
ನವದೆಹಲಿ: ರಾಮಲೀಲಾ ಮೈದಾನದಲ್ಲಿ ಆಯೋಜಿಸಿರುವ ‘ಇಂಡಿಯಾ’ ಮೈತ್ರಿಕೂಟದ ಮಹಾ ರ್‍ಯಾಲಿಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಭಾಗವಹಿಸಲಿದ್ದಾರೆ ಎಂದು ಎಎಪಿಯ ಮೂಲಗಳು ತಿಳಿಸಿವೆ.
‘ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಅವರು ಮಹಾ ರ್‍ಯಾಲಿಯಲ್ಲಿ ಭಾಗಹಿಸುತ್ತಾರೆ. ಜಾರಿ ನಿರ್ದೇಶನಾಲಯದ ಕಸ್ಟಡಿಯಿಂದ ತಮ್ಮ ಪತಿ ಕಳುಹಿಸಿರುವ ಸಂದೇಶವನ್ನು ಓದುತ್ತಾರೆ. ಇದು ದೇಶಕ್ಕೆ ಕೇಜ್ರಿವಾಲ್ ನೀಡಿದ ಸಂದೇಶವಾಗಿರಲಿದೆ’ ಎಂದು ಅದು ತಿಳಿಸಿದೆ.
ರ್‍ಯಾಲಿಯಲ್ಲಿ ಮೈತ್ರಿಕೂಟದ ಪ್ರಮುಖ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಶರದ್ ಪವಾರ್, ಉದ್ಧವ್ ಠಾಕ್ರೆ, ಅಖಿಲೇಶ್ ಯಾದವ್ ಮತ್ತು ತೇಜಸ್ವಿ ಯಾದವ್ ಭಾಗವಹಿಸಲಿದ್ದಾರೆ. ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಕೂಡ ಭಾಗವಹಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.