ADVERTISEMENT

ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂನ ಅಧಿಕೃತ ಟ್ವಿಟರ್ ಖಾತೆ ಹ್ಯಾಕ್

ಪಿಟಿಐ
Published 18 ಜುಲೈ 2021, 12:58 IST
Last Updated 18 ಜುಲೈ 2021, 12:58 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಹೈದರಾಬಾದ್: ಅಸಾದುದ್ದೀನ್ ಓವೈಸಿ ನೇತೃತ್ವದಆಲ್ ಇಂಡಿಯಾ ಮಜಿಲಿಸ್-ಇ-ಇತ್ಹೇದುಲ್‌ ಮುಸ್ಲೀಮೀನ್ (ಎಐಎಂಐಎಂ) ನ ಅಧಿಕೃತ ಟ್ವಿಟರ್ ಖಾತೆಯನ್ನು ಭಾನುವಾರ 'ಹ್ಯಾಕ್' ಮಾಡಲಾಗಿದ್ದು, ಹ್ಯಾಕರ್‌ಗಳು ಪ್ರೊಫೈಲ್ ಹೆಸರನ್ನು 'ಎಲಾನ್ ಮಸ್ಕ್' ಎಂದು ಬದಲಾಯಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇದೇ ಖಾತೆಯನ್ನು ಒಂಬತ್ತು ದಿನಗಳ ಹಿಂದೆ ಹ್ಯಾಕ್ ಮಾಡಲಾಗಿತ್ತು. ಬಳಿಕ ಮತ್ತೆ ಮರುಸ್ಥಾಪಿಸಲಾಗಿತ್ತು. ಆದರೆ ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಮತ್ತೆ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ತಿಳಿಸಿವೆ. ಇದೇ ವೇಳೆ ಹ್ಯಾಕರ್‌ಗಳು ಟ್ವಿಟರ್ ಪ್ರೊಫೈಲ್ ಹೆಸರನ್ನು ಎಐಎಂಐಎಂನಿಂದ 'ಎಲಾನ್ ಮಸ್ಕ್' ಎಂದು ಬದಲಾಯಿಸಿದ್ದಾರೆ ಮತ್ತು ಫ್ರೊಫೈಲ್ ಚಿತ್ರವನ್ನು ಕೂಡ ಬದಲಿಸಿದ್ದು, ಟೆಸ್ಲಾ ಸಿಇಒನ ಚಿತ್ರವನ್ನು ಹಾಕಿದ್ದಾರೆ.

'9 ದಿನಗಳ ಹಿಂದೆಯಷ್ಟೇ ಎಐಎಂಐಎಂನ ಟ್ವಿಟ್ಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿತ್ತು. ಆದರೆ ನಾವು ಟ್ವಿಟರ್‌ಗೆ ವಿಚಾರ ತಿಳಿಸಿದಾಗ ಖಾತೆಯನ್ನು ಮರುಸ್ಥಾಪಿಸಲಾಗಿತ್ತು. ಈಗ ಮತ್ತೆ ಖಾತೆಯನ್ನು ಹ್ಯಾಕ್ ಮಾಡಲಾಗಿದೆ' ಎಂದು ಹೈದರಾಬಾದ್ ಪ್ರಧಾನ ಕಚೇರಿಯ ವಕ್ತಾರರು ತಿಳಿಸಿದ್ದಾರೆ.

ADVERTISEMENT

ಈ ಬಗ್ಗೆ ಹೈದರಾಬಾದ್ ಪೊಲೀಸರಿಗೆ ಸೋಮವಾರ ದೂರು ನೀಡಲಾಗುವುದು, ಸದ್ಯಕ್ಕೆ ಖಾತೆಯಲ್ಲಿ ಯಾವುದೇ ಟ್ವೀಟ್‌ಗಳನ್ನು ಮಾಡಲಾಗಿಲ್ಲ ಎಂದು ತಿಳಿಸಿದ್ದಾರೆ. ಎಐಎಂಐಎಂ ಟ್ವಿಟರ್ ಖಾತೆಯು ಸುಮಾರು 6.78 ಲಕ್ಷ ಫಾಲೋವರ್‌ಗಳನ್ನು ಹೊಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.