ADVERTISEMENT

ಎದೆಗೆ ಗುಂಡಿಕ್ಕಿದರೂ ದಾಖಲೆ ನೀಡಲಾರೆ: ಅಸಾದುದ್ದೀನ್ ಒವೈಸಿ

ಏಜೆನ್ಸೀಸ್
Published 10 ಫೆಬ್ರುವರಿ 2020, 8:56 IST
Last Updated 10 ಫೆಬ್ರುವರಿ 2020, 8:56 IST
ಆಂಧ್ರ ಪ್ರದೇಶದ ಕರ್ನೂಲ್‌ನಲ್ಲಿ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಅಸಾದುದ್ದೀನ್ ಒವೈಸಿ ಮಾತನಾಡಿದರು –ಎಎನ್‌ಐ ಚಿತ್ರ
ಆಂಧ್ರ ಪ್ರದೇಶದ ಕರ್ನೂಲ್‌ನಲ್ಲಿ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಅಸಾದುದ್ದೀನ್ ಒವೈಸಿ ಮಾತನಾಡಿದರು –ಎಎನ್‌ಐ ಚಿತ್ರ   

ಕರ್ನೂಲ್:ಎದೆಗೆ ಗುಂಡಿಕ್ಕಿದರೂ ದಾಖಲೆ ಪತ್ರಗಳನ್ನು ನೀಡಲಾರೆ ಎಂದುಆಲ್‌ ಇಂಡಿಯಾ ಮಜ್ಲಿಸ್ ಇತ್ತೆಹಾದುಲ್ ಮುಸ್ಲಿಮೀನ್‌ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಸೋಮವಾರ ಹೇಳಿದ್ದಾರೆ.

ಆಂಧ್ರ ಪ್ರದೇಶದ ಕರ್ನೂಲ್‌ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ನಾನು ಈ ದೇಶದಲ್ಲೇ ಉಳಿಯುತ್ತೇನೆ. ಆದರೆ ದಾಖಲೆ ಪತ್ರಗಳನ್ನು ತೋರಿಸಲಾರೆ. ದಾಖಲೆ ಕೇಳಿದರೆ ನನ್ನ ಎದೆಯನ್ನು ತೋರಿಸಿ ಗುಂಡಿಕ್ಕುವಂತೆ ಹೇಳುತ್ತೇನೆ. ಯಾಕೆಂದರೆ, ನನ್ನ ಹೃದಯದಲ್ಲಿ ಭಾರತದ ಮೇಲಿನ ಪ್ರೀತಿ ಅಡಕವಾಗಿದೆ’ ಎಂದು ಒವೈಸಿ ಹೇಳಿದ್ದಾರೆ.

ADVERTISEMENT

ಮೋದಿ ಮತ್ತು ಅಮಿತ್ ಶಾ ವಿರುದ್ಧ ಧ್ವನಿಯೆತ್ತುವಂತೆ ಕರೆ ನೀಡಿದ ಒವೈಸಿ, ಅವರ ವಿರುದ್ಧ ದನಿಯೆತ್ತುವವರು ನಿಜಾರ್ಥದಲ್ಲಿ ಹೋರಾಟಗಾರರು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.