ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದು, ಬಿಜೆಪಿ ಸೇರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಅಧ್ಯಕ್ಷ ನಾನಾ ಪಟೋಲೆ ಅವರಿಗೆ ಬರೆದಿರುವ ಪತ್ರದಲ್ಲಿ ಪಕ್ಷ ಬಿಡುತ್ತಿರುವುದಾಗಿ ಅವರು ತಿಳಿಸಿದ್ದಾರೆ. ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿರುವ ಅವರು, ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.