ಅಶೋಕ್ ಗಜಪತಿ ರಾಜು
ಪಣಜಿ: ಮಾಜಿ ಕೇಂದ್ರ ಸಚಿವ ಅಶೋಕ್ ಗಜಪತಿ ರಾಜು ಶನಿವಾರ ರಾಜಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಗೋವಾದ ನೂತನ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಸೇರಿದಂತೆ ಹಲವಾರು ಗಣ್ಯರು ಈ ಸಮಾರಂಭದಲ್ಲಿ ಹಾಜರಾಗುವ ನಿರೀಕ್ಷೆ ಇದೆ ಎಂದು ರಾಜ್ಯ ಸರ್ಕಾರದ ವಕ್ತಾರರು ತಿಳಿಸಿದ್ದಾರೆ.
ಆಂಧ್ರಪ್ರದೇಶದ ತೆಲುಗು ದೇಶಂ ಪಕ್ಷದ (ಟಿಡಿಪಿ) ಹಿರಿಯ ನಾಯಕರಾಗಿರುವ 74 ವರ್ಷದ ರಾಜು ಅವರು ಟಿಡಿಪಿ ಸರ್ಕಾರದಲ್ಲಿ ಹಲವು ಬಾರಿ ಮಂತ್ರಿಯಾಗಿದ್ದರು. 2014 ರಿಂದ 2018ರವರೆಗೆ ನಾಗರಿಕ ವಿಮಾನಯಾನ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ಹಿಂದಿನ ರಾಜ್ಯಪಾಲ ಪಿ.ಎಸ್. ಶ್ರೀಧರನ್ ಪಿಳ್ಳೈ ಅವರಿಗೆ ಗುರುವಾರ ಬೀಳ್ಕೊಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.