ADVERTISEMENT

ಪಕ್ಷ ತೊರೆದ ಹರಿಯಾಣ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಅಶೋಕ್‌ ತನ್ವಾರ್‌ 

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2019, 10:44 IST
Last Updated 17 ಅಕ್ಟೋಬರ್ 2019, 10:44 IST
   

ಚಂಡಿಗಡ: ಹರಿಯಾಣದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವಂತೆಯೇ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಅಶೋಕ್ ತನ್ವಾರ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಶನಿವಾರ ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್‌ನಲ್ಲಿ ಟಿಕೆಟ್‌ಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ಕಳೆದ ಎರಡು ದಿನಗಳ ಹಿಂದೆ ಕಾಂಗ್ರೆಸ್‌ ಚುನಾವಣೆ ಸಮಿತಿಯಿಂದ ಹೊರ ಬಂದಿದ್ದರು.

ಪಕ್ಷದ ಕಾರ್ಯಕರ್ತರ ಜೊತೆ ಚರ್ಚಿಸಿ ಈ ನಿರ್ಧಾರ ಮಾಡಿದ್ದೇನೆ, ನಾನು ಯಾಕೆ ರಾಜೀನಾಮೆ ನೀಡಿದ್ದೇನೆ ಎಂಬ ಕಾರಣಗಳು ಕಾಂಗ್ರೆಸಿಗರಿಗೆ ಮತ್ತು ಹರಿಯಾಣದ ಜನರಿಗೆ ತಿಳಿದಿದೆ ಎಂದು ಅಶೋಕ್‌ ತನ್ವಾರ್‌ ಟ್ವೀಟ್‌ ಮಾಡಿದ್ದಾರೆ.

ADVERTISEMENT

ನಾನು ತೆಗೆದುಕೊಂಡಿರುವ ನಿರ್ಧಾರ ಸರಿಯಾಗಿದೆ. ನನ್ನ ಹೋರಾಟ ವೈಯಕ್ತಿಕವಲ್ಲ, ಬದಲಿಗೆ ಈಗಿನ ಪಕ್ಷದ ವ್ಯವಸ್ಥೆಯ ವಿರುದ್ಧ ಎಂದು ಅಶೋಕ್‌ ತನ್ವಾರ್‌ ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಬುಧವಾರ ಸೋನಿಯಾಗಾಂಧಿ ನಿವಾಸದ ಎದುರು ಪ್ರತಿಭಟನೆ ನಡೆಸಿದ್ದ ಅಶೋಕ್‌ ತನ್ವಾರ್‌ ಹರಿಯಾಣ ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿ ಇಲ್ಲ ಎಂದು ಹೇಳಿದ್ದರು.

ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವಂತೆ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟಗೊಂಡಿರುವುದು ಪಕ್ಷದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುವ ಸಾಧ್ಯತೆಗಳಿವೆ ಎಂದು‍ರಾಜಕೀಯ ಚಿಂತಕರು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.