ADVERTISEMENT

ಐಎಎಸ್‌ ಅಧಿಕಾರಿಯಾಗಿದ್ದ ಅಶ್ವಿನಿ ವೈಷ್ಣವ್‌ ರೈಲ್ವೆ ಸಚಿವರಾಗಿ ಅಧಿಕಾರ ಸ್ವೀಕಾರ

ಪಿಟಿಐ
Published 8 ಜುಲೈ 2021, 6:36 IST
Last Updated 8 ಜುಲೈ 2021, 6:36 IST
ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಬುಧವಾರ ನಡೆದ ಸರಳ ಸಮಾರಂಭದಲ್ಲಿ ಮಾಜಿ ಐಎಎಸ್ ಅಧಿಕಾರಿ ಅಶ್ವಿನಿ ವೈಷ್ಣವ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕ್ಷಣ.
ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಬುಧವಾರ ನಡೆದ ಸರಳ ಸಮಾರಂಭದಲ್ಲಿ ಮಾಜಿ ಐಎಎಸ್ ಅಧಿಕಾರಿ ಅಶ್ವಿನಿ ವೈಷ್ಣವ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕ್ಷಣ.   

ನವದೆಹಲಿ: ಆಡಳಿತಾಧಿಕಾರಿ, ಉದ್ಯಮಿಯಾಗಿ ನಂತರ ರಾಜಕೀಯ ಕ್ಷೇತ್ರವನ್ನು ಪ್ರವೇಶಿಸಿರುವ ಮಾಜಿ ಐಎಎಸ್‌ ಅಧಿಕಾರಿ ಅಶ್ವಿನಿ ವೈಷ್ಣವ್‌ ಅವರು ನೂತನ ರೈಲ್ವೆ ಸಚಿವರಾಗಿ ಗುರುವಾರ ಅಧಿಕಾರ ಸ್ವೀಕರಿಸಿದರು.

ಒಡಿಶಾ ರಾಜ್ಯದಿಂದ ರಾಜ್ಯಸಭಾ ಸದಸ್ಯರಾಗಿರುವ ಅಶ್ವಿನಿ ವೈಷ್ಣವ್‌ ಅವರು ಅಧಿಕಾರವಹಿಸಿಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, '67 ವರ್ಷಗಳಲ್ಲಿ ರೈಲ್ವೆ ಸಚಿವಾಲಯದಲ್ಲಿ ಅತ್ಯುತ್ತಮ ಕಾರ್ಯಗಳು ನಡೆದಿವೆ. ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಯೋಜನೆಗಳನ್ನು ಪರಿಪೂರ್ಣಗೊಳಿಸಲುನಾನು ಪ್ರಯತ್ನಿಸುತ್ತೇನೆ‘ ಎಂದರು.

ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದಿಂದ ಎಂಬಿಎ ಪದವಿ, ಖರಗ್‌ಪುರ –ಐಐಟಿಯಿಂದಎಂ.ಟೆಕ್ ಪದವಿ ಪಡೆದಿರುವ ವೈಷ್ಣವ್ ಅವರು, ಜಾಗತಿಕ ಮಟ್ಟದ ಜನರಲ್ ಎಲೆಕ್ಟ್ರಿಕಲ್ಸ್ ಮತ್ತು ಸೀಮನ್ಸ್‌ ನಂತಹ ಪ್ರಮುಖ ಕಂಪನಿಗಳನ್ನು ಮುನ್ನಡೆಸುವಲ್ಲಿ ಪ್ರಧಾನ ಪಾತ್ರವಹಿಸಿದ್ದರು.

ADVERTISEMENT

1994ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿದ್ದ ಅಶ್ವಿನಿ ವೈಷ್ಣವ್‌, ಹದಿನೈದು ವರ್ಷಗಳ ತಮ್ಮ ಅಧಿಕಾರಾವಧಿಯಲ್ಲಿ ಪ್ರಮುಖವಾದ ಜವಾಬ್ದಾರಿಗಳನ್ನು ನಿರ್ವಹಿಸುವ ಜತೆಗೆ, ಮೂಲಸೌಕರ್ಯ ಅಭಿವೃದ್ಧಿ ಕ್ಷೇತ್ರದಲ್ಲಿ ಸಾರ್ವಜನಿಕ–ಖಾಸಗಿ ಸಹಭಾಗಿತ್ವ(ಪಿಪಿಪಿ) ಯೋಜನೆಗೆ ಒಂದು ಉತ್ತಮ ಚೌಕಟ್ಟನ್ನು ರೂಪಿಸಿದ್ದರು. ಈ ಅನುಭವ, ತಾವು ನಿರ್ವಹಿಸುವ ರೈಲ್ವೆ ಕ್ಷೇತ್ರದ ಅಭಿವೃದ್ಧಿಗೆ ಸಹಾಯವಾಗಲಿದೆ.

ರೈಲ್ವೆ ಸಚಿವರಾಗಿರುವ ವೈಷ್ಣವ್ ಅವರಿಗೆ ದೂರಸಂಪರ್ಕ ಮತ್ತು ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಜವಾಬ್ದಾರಿಯನ್ನೂ ವಹಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.