ಸಾವು (ಪ್ರಾತಿನಿಧಿಕ ಚಿತ್ರ)
ಸುಕ್ಮಾ: ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಸೋಮವಾರ ನಕ್ಸಲರು ಹುದುಗಿಸಿ ಇಟ್ಟಿದ್ದ ಕಚ್ಚಾಬಾಂಬ್ ಸ್ಫೋಟಗೊಂಡು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ(ಎಎಸ್‌ಪಿ) ಸಾವಿಗೀಡಾಗಿದ್ದಾರೆ. ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ದೋಂಡ್ರಾ ಗ್ರಾಮದ ಬಳಿ ದುರಂತ ನಡೆದಿದ್ದು, ಕೊಂಟಾ ವಿಭಾಗದ ಎಎಸ್‌ಪಿ ಆಕಾಶ್ ರಾವ್ ಗಿರೆಪುಂಜೆ ಮೃತಪಟ್ಟವರು. ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಮತ್ತು ಉಪ ಮುಖ್ಯಮಂತ್ರಿ ವಿಜಯ್ ಶರ್ಮಾ ಪೊಲೀಸ್ ಅಧಿಕಾರಿ ಸಾವಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.
ನಕ್ಸಲರು ಯಂತ್ರವೊಂದಕ್ಕೆ ಬೆಂಕಿ ಹಚ್ಚಿದ್ದಾರೆ ಎಂಬ ಮಾಹಿತಿ ಆಧರಿಸಿ ಎಎಸ್‌ಪಿ ಮತ್ತು ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದರು. ನಕ್ಸಲ್ ಪೀಡಿತ ಮಾನ್ಪುರ್, ಮೊಹ್ಲಾ ಮತ್ತು ಸುಕ್ಮಾದಲ್ಲಿ ಆಕಾಶ್ ರಾವ್ ಕರ್ತವ್ಯ ನಿರ್ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.