
ನವದೆಹಲಿ: ಈಶಾನ್ಯ ರಾಜ್ಯಗಳಾದ ಅಸ್ಸಾಂ ಹಾಗೂ ತ್ರಿಪುರಾದಲ್ಲಿ ಒಂದು ತಾಸಿನ ಅಂತರದಲ್ಲಿ ಎರಡೆರಡು ಬಾರಿ ಭೂಮಿ ಕಂಪಿಸಿದೆ.
ರಿಕ್ಟರ್ ಮಾಪಕದಲ್ಲಿ ಅಸ್ಸಾಂನಲ್ಲಿ 5.1 ಹಾಗೂ ತ್ರಿಪುರಾದಲ್ಲಿ 3.9 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪನ ಅಧ್ಯಯನ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.
ತ್ರಿಪುರಾದ ಗೋಮತಿಯಲ್ಲಿ ಮೊದಲ ಕಂಪನ ಮುಂಜಾನೆ 3.33ರ ಹೊತ್ತಿಗೆ ಸಂಭವಿಸಿತು. ಇದಾದ ನಂತರ 4.17ರ ಹೊತ್ತಿಗೆ ಅಸ್ಸಾಂನ ಮೋರಿಗಾಂವ್‌ನಲ್ಲಿ ಭೂಮಿ ಕಂಪಿಸಿದೆ ಎಂದು ಎನ್‌ಸಿಎಸ್ ತಿಳಿಸಿದೆ.
ಈ ಲಘು ಭೂಕಂಪನದಲ್ಲಿ ಯಾವುದೇ ಸಾವು-ನೋವಿನ ಬಗ್ಗೆ ವರದಿಯಾಗಿಲ್ಲ.
ಬ್ರಹ್ಮಪುತ್ರ ನದಿಯ ದಕ್ಷಿಣ ದಂಡೆಯಲ್ಲಿರುವ ಮೋರಿಗಾವ್ ಜಿಲ್ಲೆಯಲ್ಲಿ 50 ಕಿ.ಮೀ. ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಪತ್ತೆಯಾಗಿದೆ. ಸಮೀಪದ ಜಿಲ್ಲೆಗಳಲ್ಲೂ ಕಂಪನದ ಅನುಭವವಾಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಭಯಭೀತರಾದ ಜನರು ಮನೆಯಿಂದ ಹೊರಗಡೆ ಓಡಿ ಹೋಗಿದ್ದಾರೆ.
ಭೂತಾನ್, ಚೀನಾದ ಕೆಲವು ಭಾಗಗಳಲ್ಲಿ ಮತ್ತು ಬಾಂಗ್ಲಾದೇಶದಲ್ಲೂ ಕಂಪನ ಉಂಟಾಗಿರುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.