ADVERTISEMENT

ಅಸ್ಸಾಂ: ಸಾಮಾನ್ಯ ವಿಜ್ಞಾನ ಪ್ರಶ್ನೆ ಪತ್ರಿಕೆ ₹ 3,000ದವೆರೆಗೆ ಮಾರಾಟ

ಪಿಟಿಐ
Published 16 ಮಾರ್ಚ್ 2023, 13:45 IST
Last Updated 16 ಮಾರ್ಚ್ 2023, 13:45 IST
.
.   

ಗುವಾಹಟಿ: ‘ಅಸ್ಸಾಂನಲ್ಲಿ 10ನೇ ತರಗತಿಯ ರಾಜ್ಯ ಬೋರ್ಡ್ ಪರೀಕ್ಷೆಯ ಸಾಮಾನ್ಯ ವಿಜ್ಞಾನ ಪ್ರಶ್ನೆ ಪತ್ರಿಕೆಯನ್ನು ವಾಟ್ಸ್‌ಆ್ಯಪ್‌ನಲ್ಲಿ ₹ 3,000ವರೆಗೆ ಮಾರಾಟ ಮಾಡಿರುವುದು ತನಿಖೆಯಿಂದ ತಿಳಿದು ಬಂದಿದೆ’ ಎಂದು ಪೊಲೀಸ್ ಮಹಾನಿರ್ದೇಶಕ ಜ್ಞಾನೇಂದ್ರ ಪ್ರತಾಪ್ ಸಿಂಗ್ ಗುರುವಾರ ತಿಳಿಸಿದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಶ್ನೆಪತ್ರಿಕೆ ಸೋರಿಕೆಯ ಮೂಲವನ್ನು ಪತ್ತೆಹಚ್ಚಲು ವಾಟ್ಸ್‌ಆ್ಯಪ್‌ನ ಸಹಾಯವನ್ನು ಪಡೆಯಲು ಪ್ರಯತ್ನಿಸಲಾಗುತ್ತಿದೆ’ ಎಂದರು.

‘ಪ್ರಶ್ನೆ ಪತ್ರಿಕೆಯು ವಿವಿಧೆಡೆ ₹ 100, ₹ 200ಕ್ಕೂ ಮಾರಾಟವಾಗಿರುವುದು ಗೊತ್ತಾಗಿದೆ. ತನಿಖೆಯ ದೃಷ್ಟಿಯಿಂದ ಮತ್ತಷ್ಟು ಪ್ರಶ್ನೆಪತ್ರಿಕೆಗಳನ್ನು ಸಿಐಡಿ ಕೇಂದ್ರ ಕಚೇರಿಗೆ ಕಳುಹಿಸಲಾಗುವುದು’ ಎಂದು ಹೇಳಿದರು.

ADVERTISEMENT

‘ಪ್ರಶ್ನೆ ಪತ್ರಿಕೆ ಸೋರಿಕೆಯ ಪ್ರಮುಖ ಸೂತ್ರಧಾರರನ್ನು ಬಂಧಿಸುವವರೆಗೆ ಈ ಕಾರ್ಯಾಚರಣೆ ನಡೆಸಲಾಗುವುದು. ನಾವು ಈಗಾಗಲೇ ಮತ್ತಷ್ಟು ಜನರನ್ನು ಬಂಧಿಸಿದ್ದು, ಅವರ ವಿಚಾರಣೆ ನಡೆಯುತ್ತಿದೆ’ ಎಂದು ವಿವರಿಸಿದರು.

ಅಸ್ಸಾಂ ಪ್ರೌಢ ಶಿಕ್ಷಣ ಮಂಡಳಿಯು ಕಳೆದ ಸೋಮವಾರ ನಡೆಸಬೇಕಿದ್ದ 10ನೇ ತರಗತಿಯ ಸಾಮಾನ್ಯ ವಿಜ್ಞಾನ ಪ್ರಶ್ನೆ ಪತ್ರಿಕೆಯನ್ನು ಭಾನುವಾರ ರಾತ್ರಿ ಸೋರಿಕೆ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.