
ಸಾಂದರ್ಭಿಕ ಚಿತ್ರ
ಗುವಾಹಟಿ: ಅಸ್ಸಾಂನ ಕೊಕ್ರಾಝಾರ್‌ನಲ್ಲಿ ಮಂಗಳವಾರ ಬೋಡೊ ಮತ್ತು ಆದಿವಾಸಿಗಳ ನಡುವೆ ಸೋಮವಾರ ರಾತ್ರಿ ನಡೆದ ಘರ್ಷಣೆಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಕೊಕ್ರಾಝಾರ್ ಜಿಲ್ಲೆಯ ಕರಿಗಾಂವ್ ಹೊರಠಾಣೆ ವ್ಯಾಪ್ತಿಯ ಮಾನ್ಸಿಂಗ್ ರಸ್ತೆಯಲ್ಲಿ ಮೂವರು ಬೋಡೊಗಳನ್ನು ಕರೆದೊಯ್ಯುತ್ತಿದ್ದ ವಾಹನವು ಇಬ್ಬರು ಆದಿವಾಸಿ ವ್ಯಕ್ತಿಗಳಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಕೆರಳಿದ ಆದಿವಾಸಿಗಳು ಮೂವರು ಬೋಡೊಗಳನ್ನು ಥಳಿಸಿ, ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ. ಈ ಘಟನೆಯಲ್ಲಿ ವ್ಯಕ್ತಿಯೊಬ್ಬರು ಅಸುನೀಗಿದ್ದಾರೆ.
ಮಂಗಳವಾರ ಬೋಡೊ ಮತ್ತು ಆದಿವಾಸಿ ಸಮುದಾಯದವರು ಕರಿಗಾಂವ್ ಹೊರಠಾಣೆ ಪಕ್ಕದಲ್ಲಿರುವ ರಾಷ್ಟ್ರೀಯ ಹೆದ್ದಾರಿ ನಡೆ ನಡೆಸಿ ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವು ಮನೆಗಳಿಗೆ ಹಾಗೂ ಸರ್ಕಾರಿ ಕಚೇರಿಗೆ ಬೆಂಕಿ ಹಚ್ಚಿದ್ದಾರೆ. ಕರಿಗಾಂವ್ ಠಾಣೆ ಮೇಲೂ ದಾಳಿ ಮಾಡಿದ್ದಾರೆ. ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿ, ಅಶ್ರುವಾಯು ಸಿಡಿಸಿದರು. ಘಟನೆಯಲ್ಲಿ ಕೆಲ ಪೊಲೀಸರು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ ಎಂದು ಗೃಹ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
‘ಸ್ಥಳದಲ್ಲಿ ಕ್ಷಿಪ್ರ ಕಾರ್ಯಪಡೆಯನ್ನು ನಿಯೋಜಿಸಲಾಗಿದೆ. ಸೇನೆ ನಿಯೋಜಿಸಲು ಕ್ರಮ ಕೈಗೊಳ್ಳಲಾಗಿದೆ. ಕೊಕ್ರಾಝಾರ್ ಹಾಗೂ ಚಿರಾಂಗ್ ಜಿಲ್ಲೆಯಲ್ಲಿ ಇಂಟರ್ನೆಟ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ’ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ‘ಎಕ್ಸ್’ನಲ್ಲಿ ತಿಳಿಸಿದ್ದಾರೆ.
ಪ್ರತಿಭಟಿಸುವ ಹಕ್ಕು ಎಲ್ಲರಿಗಿದೆ. ಆದರೆ ಅದು ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಯಬೇಕು. ಜನರು ಹಿಂಸಾಚಾರಕ್ಕೆ ಇಳಿಯಬಾರದುಹಗ್ರಾಮಾ ಮೊಹಿಲರಿ ಬೋಡೊಲ್ಯಾಂಡ್ ಪ್ರಾದೇಶಿಕ ಪರಿಷತ್ ಮುಖ್ಯಸ್ಥ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.