ADVERTISEMENT

ಮುಸ್ಲಿಂ ಮಹಿಳೆ ತನ್ನ ಪತಿ ಮೂರು ಮದುವೆಯಾಗುವುದನ್ನು ಒಪ್ಪುವುದಿಲ್ಲ: ಅಸ್ಸಾಂ ಸಿಎಂ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಮೇ 2022, 11:18 IST
Last Updated 1 ಮೇ 2022, 11:18 IST
   

ಬೆಂಗಳೂರು: ದೇಶದಲ್ಲಿ ಯಾವುದೇ ಮುಸ್ಲಿಂ ಮಹಿಳೆ, ತನ್ನ ಪತಿ ಮೂರು ಮದುವೆಯಾಗುವುದನ್ನು ಒಪ್ಪುವುದಿಲ್ಲ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ಏಕರೂಪ ನಾಗರಿಕ ಸಂಹಿತೆ ಜಾರಿ ಕುರಿತಂತೆ ಮಾತನಾಡಿರುವ ಅವರು, ಯಾವುದೇ ಮುಸ್ಲಿಂ ಮಹಿಳೆಯ ಅಭಿಪ್ರಾಯವನ್ನು ಕೇಳಿನೋಡಿ. ತ್ರಿವಳಿ ತಲಾಕ್ ತೆಗೆದ ಬಳಿಕ, ಅವರಿಗೆ ಅನುಕೂಲವಾಗಿದೆ. ಅದೇ ರೀತಿಯಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡಬೇಕಿದೆ. ಅದರಿಂದ ಮಾತ್ರವೇ ಅವರಿಗೆ ನ್ಯಾಯ ದೊರೆಯಬಹುದು ಎಂದು ಸುದ್ದಿಸಂಸ್ಥೆ ‘ಎಎನ್‌ಐ‘ ಜತೆ ಮಾತನಾಡುತ್ತಾ ಅಸ್ಸಾಂ ಸಿಎಂ ಹೇಳಿದ್ದಾರೆ.

ಅಸ್ಸಾಂ ಜನಸಂಖ್ಯೆಯಲ್ಲಿ ಶೇ 30ಕ್ಕೂ ಹೆಚ್ಚು ಮುಸ್ಲಿಮರು ಇದ್ದಾರೆ.

ADVERTISEMENT

ಮುಸ್ಲಿಂ ಮಹಿಳೆಯರ ಅಭಿವೃದ್ಧಿ ಮತ್ತು ಕಲ್ಯಾಣಕ್ಕಾಗಿ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಮಾಡುವುದು ಅಗತ್ಯವಾಗಿದೆ. ಕಾಯ್ದೆ ಜಾರಿ ಮಾಡುವುದನ್ನು ಬೆಂಬಲಿಸುತ್ತೇನೆ ಎಂದು ಬಿಸ್ವಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.