ADVERTISEMENT

ಅಸ್ಸಾಂ: ಕಾಂಗ್ರೆಸ್‌ನ 42 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಗೋಗೊಯಿಗೆ ಟಿಕೆಟ್

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2026, 7:54 IST
Last Updated 4 ಮಾರ್ಚ್ 2026, 7:54 IST
<div class="paragraphs"><p>ಗೌರವ್ ಗೋಗೊಯಿ</p></div>

ಗೌರವ್ ಗೋಗೊಯಿ

   

ಗುವಾಹಟಿ: ಅಸ್ಸಾಂ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ 42 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿದೆ. 

ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್‌ ಗೊಗೊಯಿ ಅವರ ಪುತ್ರ ಹಾಗೂ ಲೋಕಸಭೆಯಲ್ಲಿ ಕಾಂಗ್ರೆಸ್‌ ಪಕ್ಷದ ಉಪನಾಯಕರಾಗಿರುವ ಗೌರವ್ ಗೋಗೊಯಿ ಮೊದಲ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ADVERTISEMENT

ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿಯ (ಎಪಿಸಿಸಿ) ಅಧ್ಯಕ್ಷರಾಗಿರುವ ಗೌರವ್‌ ಗೊಗೊಯಿ ಜೋರ್ಹಾಟ್ ವಿಧಾನಸಭಾ ಕ್ಷೇತ್ರದಿಂದ ಸ್ಫರ್ಧೆ ಮಾಡುತ್ತಿದ್ದಾರೆ. ಮೊದಲ ಪಟ್ಟಿಯಲ್ಲಿ ಐವರು ಮುಸ್ಲಿಂ, ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ.

ಈ ಪಟ್ಟಿಯಲ್ಲಿ ಹಾಲಿ ಮತ್ತು ಮಾಜಿ ಶಾಸಕರಿಗೂ ಟಿಕೆಟ್ ನೀಡಲಾಗಿದೆ. ಪಕ್ಷದ ಪ್ರಮುಖ ನಾಯಕರಾದ ದೇವಬ್ರತ ಸೈಕಿಯಾ, ಹಿರಿಯ ನಾಯಕಿ ಪ್ರಣತಿ ಫುಕನ್, ಮಾಜಿ ಸಚಿವ ಅಜಿತ್ ಸಿಂಗ್, ರಾಜ್ಯಸಭಾ ಸದಸ್ಯ ರಿಪುನ್ ಬೋರಾ, ಶಾಸಕಿ ನಂದಿತಾ ದಾಸ್, ಮೀರಾ ಗೊಸ್ವಾಮಿ ಹಾಗೂ ದುರ್ಗಾ ಅವರು ಟಿಕೆಟ್‌ ಪಡೆದಿದ್ದಾರೆ.

ಈ ಸಲದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪಕ್ಷದ ಮುಖಂಡರು ವ್ಯಾಪಕವಾಗಿ ಪ್ರಚಾರ ಮಾಡುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.