ಜಪ್ತಿ ಮಾಡಲಾದ ಮಾದಕವಸ್ತು
ಗುವಾಹಟಿ: ಅಸ್ಸಾಂನ ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ₹4 ಕೋಟಿಗೂ ಹಚ್ಚಿನ ಮೌಲ್ಯದ ಮಾದಕವಸ್ತು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಿಮಂತ ಬಿಸ್ವಾ ಶರ್ಮಾ ಪೋಸ್ಟ್ ಹಂಚಿಕೊಂಡು ಮಾಹಿತಿ ನೀಡಿದ್ದಾರೆ.
ವಾರಾಂತ್ಯದಲ್ಲಿ ನಡೆದ ಮಾದಕ ವಸ್ತು ವಿರೋಧಿ ಕಾರ್ಯಾಚರಣೆಯಲ್ಲಿ ₹4 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದು, ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ನಡೆಸಿದ ಕಾರ್ಯಾಚರಣೆಯನ್ನು ಶರ್ಮಾ ಅಭಿನಂದಿಸಿದ್ದಾರೆ. ರಾಜ್ಯದಲ್ಲಿ ಮಾದಕ ವಸ್ತು ವಿರೋಧಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಶರ್ಮಾ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.