ಭೂಕಂಪ
ಗುವಾಹಟಿ: ಅಸ್ಸಾಂನ ಗುವಾಹಟಿಯಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.8ರಷ್ಟು ತೀವ್ರತೆ ದಾಖಲಾಗಿದೆ.
ಭೂಕಂಪದಿಂದ ಹಾನಿಯಾದ ಬಗ್ಗೆ ತಕ್ಷಣಕ್ಕೆ ವರದಿಯಾಗಿಲ್ಲ.
ಭಾನುವಾರ ಸಂಜೆ 4.41ರ ಹೊತ್ತಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. 5 ಕಿ.ಮೀ ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ರಾಷ್ಟ್ರೀಯ ಭೂಕಂಪನ ಶಾಸ್ತ್ರ ಕೇಂದ್ರ ತಿಳಿಸಿದೆ.
ಭೂಕಂಪದ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವ ಸರ್ಬಾನಂದ ಸೋನೊವಾಲ್, ‘ಅಸ್ಸಾಂನಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಎಲ್ಲರೂ ಸುರಕ್ಷಿತವಾಗಿ, ಎಚ್ಚರಿಕೆಯಿಂದಿರಿ’ ಎಂದು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.