ADVERTISEMENT

Assam Election Results: ಅಸ್ಸಾಂ ಚುನಾವಣಾ ಫಲಿತಾಂಶದ ಮುಖ್ಯಾಂಶಗಳು

​ಪ್ರಜಾವಾಣಿ ವಾರ್ತೆ
Published 2 ಮೇ 2021, 12:20 IST
Last Updated 2 ಮೇ 2021, 12:20 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಗುವಾಹಟಿ: ಅಸ್ಸಾಂ ವಿಧಾನಸಭೆ ಚುನಾವಣೆಗೆ ನಡೆದ ಮತದಾನದ ಮತ ಎಣಿಕೆ ಪ್ರಗತಿಯಲ್ಲಿದೆ. ಫಲಿತಾಂಶದ ಮುಖ್ಯಾಂಶಗಳು ಮತ್ತು ಲೇಟೆಸ್ಟ್ ಹೈಲೈಟ್ಸ್ ಇಲ್ಲಿವೆ.

* ಜನತೆ ನಮ್ಮನ್ನು ಆಶೀರ್ವದಿಸಿದ್ದಾರೆ:ಮುಖ್ಯಮಂತ್ರಿ ಸರ್ಬಾನಂದ್‌ ಸೊನೊವಾಲ್‌

* ಅಸ್ಸಾಂನಲ್ಲಿಎರಡನೇಬಾರಿಗೆ ಎನ್‌ಡಿಎ ಅಧಿಕಾರಕ್ಕೇರುವುದು ಬಹುತೇಕ ಖಚಿತವಾಗಿದೆ.

ADVERTISEMENT

*ಅಸ್ಸಾಂನಲ್ಲಿ ನಾವು ಅಧಿಕಾರ ಉಳಿಸಿಕೊಳ್ಳುತ್ತೇವೆ: ಮುಖ್ಯಮಂತ್ರಿ ಸರ್ಬಾನಂದ್‌ ಸೊನೊವಾಲ್‌ ಹೇಳಿಕೆ.

*ಚುನಾವಣೆಯಲ್ಲಿ ಬಳಸದ ಮತಯಂತ್ರ ಮತ ಎಣಿಕೆ ಕೇಂದ್ರದಲ್ಲಿ ಪತ್ತೆಯಾದ ವಿದ್ಯಮಾನ ಅಸ್ಸಾಂನ ಹೈಲಾಕಂಡಿ ಜಿಲ್ಲೆಯಲ್ಲಿ ನಡೆದಿದೆ.

* ಅಸ್ಸಾಂನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರ ಉಳಿಸಿಕೊಳ್ಳಲಿದೆ ಎಂದು ಅಲ್ಲಿನ ಮುಖ್ಯಮಂತ್ರಿ ಸರ್ಬಾನಂದ್‌ ಸೊನೊವಾಲ್‌ ಹೇಳಿದ್ದಾರೆ. ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದು, ಪಕ್ಷವು ಭಾರಿ ಮುನ್ನಡೆ ಕಾಯ್ದುಕೊಂಡಿದೆ. ಗೆಲುವು ಬಹುತೇಕ ಖಚಿತವಾಗುತ್ತಿದ್ದಂತೆ ಪ್ರತಿಕ್ರಿಯಿಸಿದ ಅವರು, ‘ರಾಜ್ಯದ ಜನ ನಮ್ಮನ್ನು ಆಶೀರ್ವದಿಸಿದ್ದಾರೆ. ಮತ್ತೆ ಅಧಿಕಾರ ನೀಡಿದ್ದಾರೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.