ADVERTISEMENT

ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರ; ಅಸ್ಸಾಂನ ನಾಯಕರ ಜತೆ ರಾಹುಲ್, ಖರ್ಗೆ ಸಭೆ

ಪಿಟಿಐ
Published 30 ಮೇ 2025, 9:16 IST
Last Updated 30 ಮೇ 2025, 9:16 IST
<div class="paragraphs"><p> ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಅಸ್ಸಾಂನ ಕಾಂಗ್ರೆಸ್‌ ನಾಯಕರ ಜತೆ ಚರ್ಚೆ ನಡೆಸಿದರು.</p></div>

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಅಸ್ಸಾಂನ ಕಾಂಗ್ರೆಸ್‌ ನಾಯಕರ ಜತೆ ಚರ್ಚೆ ನಡೆಸಿದರು.

   

ನವದೆಹಲಿ; ಮುಂಬರುವ ಅಸ್ಸಾಂ ವಿಧಾನಸಭಾ ಚುನಾವಣೆ ಹಿನ್ನೆಲೆ ಚುನಾವಣಾ ಕಾರ್ಯತಂತ್ರಗಳನ್ನು ರೂಪಿಸುವ ನಿಟ್ಟಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಅಸ್ಸಾಂನ ಪಕ್ಷದ ನಾಯಕರ ಜತೆ ಚರ್ಚೆ ನಡೆಸಿದರು.

ಇಲ್ಲಿನ ಕಾಂಗ್ರೆಸ್‌ ಪ್ರಧಾನ ಕಚೇರಿ ಇಂದಿರಾ ಭವನದಲ್ಲಿ ಸಭೆ ನಡೆಸಿದರು.

ADVERTISEMENT

ಗೌರವ್ ಗೊಗೊಯಿ ಅವರನ್ನು ಅಸ್ಸಾಂ ಕಾಂಗ್ರೆಸ್‌ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲುವ ಮೂಲಕ ಬದಲಾವಣೆಗಳಾಗಿದ್ದು, ಮುಂಬರುವ ಅಸ್ಸಾಂನ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ಕಾರ್ಯತಂತ್ರ ರೂಪಿಸುವ ನಿಟ್ಟಿನಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಈ ಸಂಬಂಧ ರಾಹುಲ್‌ ಗಾಂಧಿ ಅವರು ಫೇಸ್‌ಬುಕ್‌ ಅಧಿಕೃತ ಖಾತೆಯಲ್ಲಿ ಅಸ್ಸಾಂ ನಾಯಕರ ಜತೆಗಿನ ಫೋಟೊಗಳನ್ನು ಹಂಚಿಕೊಂಡು ಮಾಹಿತಿ ನೀಡಿದ್ದಾರೆ.

‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ, ಹೊಸದಾಗಿ ರಚನೆಯಾದ ಅಸ್ಸಾಂನ ಕಾಂಗ್ರೆಸ್ ಸಮಿತಿ ಸದಸ್ಯರರೊಂದಿಗೆ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಸಭೆ ನಡೆಸಲಾಯಿತು ಎಂದು ರಾಹುಲ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಈ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸೇರಿದಂತೆ ಇತರೆ ಮುಖಂಡರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.