ADVERTISEMENT

ಅಸ್ಸಾಂ ಪ್ರವಾಹ: ಸಾವಿನ ಸಂಖ್ಯೆ 24ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 22 ಮೇ 2022, 16:52 IST
Last Updated 22 ಮೇ 2022, 16:52 IST

ಗುವಾಹಟಿ: ಅಸ್ಸಾಂನಲ್ಲಿ ಭಾನುವಾರ ಪ್ರವಾಹ ಪರಿಸ್ಥಿತಿ ಹದಗೆಟ್ಟಿದ್ದು, ಇಬ್ಬರು ಮಕ್ಕಳು ಸೇರಿದಂತೆ ಆರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದರಿಂದ ಪ್ರವಾಹದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ 24ಕ್ಕೆ ಏರಿದೆ.

ರಾಜ್ಯದ 22 ಜಿಲ್ಲೆಗಳಲ್ಲಿ ಸುಮಾರು 7.2 ಲಕ್ಷ ಜನರು ಪ್ರವಾಹದಿಂದ ಸಂಕಷ್ಟಕ್ಕೊಳಗಾಗಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿ 1,413 ಗ್ರಾಮಗಳು ಜಲಾವೃತವಾಗಿವೆ. ನಾಗಾಂವ್‌ ಜಿಲ್ಲೆ ಅತಿ ಹೆಚ್ಚು ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರವಾಹದಿಂದ ರಾಜ್ಯದಲ್ಲಿ 46,160 ಹೆಕ್ಟೇರ್ ಬೆಳೆ ಪ್ರದೇಶ ಮುಳುಗಡೆಯಾಗಿದೆ. ಹಲವೆಡೆ ಭೂ ಕುಸಿತ ಸಂಭವಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.ರಾಜ್ಯದ 14 ಜಿಲ್ಲೆಗಳಲ್ಲಿ 248 ಪರಿಹಾರ ಶಿಬಿರಗಳನ್ನು ನಡೆಸಲಾಗುತ್ತಿದ್ದು, ಅಲ್ಲಿ 6,911 ಮಕ್ಕಳು ಸೇರಿದಂತೆ 48,304 ಜನರು ಆಶ್ರಯ ಪಡೆದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.