ಜುಬೀನ್ ಗರ್ಗ್
-ಪಿಟಿಐ ಚಿತ್ರ
ಗುವಾಹಟಿ: ಅಸ್ಸಾಂನ ಖ್ಯಾತ ಗಾಯಕ ಜುಬೀನ್ ಗರ್ಗ್ ಅವರ ಸಾವಿನ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.
ಈಶಾನ್ಯ ಭಾರತ ಉತ್ಸವದಲ್ಲಿ ಭಾಗವಹಿಸಲು ಸಿಂಗಪುರಕ್ಕೆ ಬಂದಿದ್ದ ಜುಬೀನ್ ಗರ್ಗ್ ಅವರು ವಿಹಾರ ನೌಕೆಯಲ್ಲಿ ಈಜುವಾಗ ಉಸಿರಾಟದ ತೊಂದರೆಯಿಂದ ಕೊನೆಯುಸಿರೆಳೆದಿದ್ದರು.
ಈಶಾನ್ಯ ಭಾರತ ಉತ್ಸವದ ಆಯೋಜಕ ಶ್ಯಾಮಕಾನು ಮಹಾಂತ ಮತ್ತು ಗಾಯಕನ ವ್ಯವಸ್ಥಾಪಕ ಸಿದ್ಧಾರ್ಥ ಶರ್ಮಾ ವಿರುದ್ಧ ಮೋರಿಗಾಂವ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಜುಬೀನ್ ಗರ್ಗ್ ಸಾವಿನ ಕುರಿತು ಅಸ್ಸಾಂ ಪೊಲೀಸರು ತನಿಖೆ ನಡೆಸಲಿದ್ದಾರೆ. ಶ್ಯಾಮಕಾನು ಮಹಾಂತ ಮತ್ತು ಸಿದ್ಧಾರ್ಥ ಶರ್ಮಾ ಸೇರಿದಂತೆ ಕೊನೆಯ ಕ್ಷಣದಲ್ಲಿ ಗಾರ್ಗ್ ಅವರೊಂದಿಗೆ ಇದ್ದವರನ್ನು ವಿಚಾರಣೆ ನಡೆಸಲಾಗುವುದು ಎಂದು ಸಿಎಂ ಶರ್ಮಾ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.